ಶನಿವಾರ, ಜುಲೈ 2, 2022
22 °C
ದೇಶದ್ರೋಹ ಪ್ರಕರಣದಲ್ಲಿ ಜಾಮೀನು ಪಡೆದಿರುವ ಸಂಸದೆ ನವನೀತ್ ರಾಣಾ ಮತ್ತು ಶಾಸಕ ರವಿ ರಾಣಾ

ಜೂನ್ 15ರ ವರೆಗೂ ರಾಣಾ ದಂಪತಿ ಬಂಧಿಸಲ್ಲ: ಮುಂಬೈ ಪೊಲೀಸ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ (ಪಿಟಿಐ): ಮಹಾರಾಷ್ಟ್ರ ಪಕ್ಷೇತರ ಸಂಸದೆ ನವನೀತ್‌ ರಾಣಾ ಮತ್ತು ಅವರ ಪತಿ ಶಾಸಕ ರವಿ ರಾಣಾ ಅವರನ್ನು ಜೂ.15ರ ವರೆಗೂ ಬಂಧಿಸುವುದಿಲ್ಲ ಎಂದು ಮುಂಬೈ ಪೊಲೀಸರು ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರ ನಿವಾಸದ ಎದುರು ಹನುಮಾನ್‌ ಚಾಲೀಸಾ ಪಠಿಸುವುದಾಗಿ ರಾಣಾ ದಂಪತಿ ಹೇಳಿಕೆ ನೀಡಿದ್ದರು. ಪ್ರಕರಣ ಸಂಬಂಧ ದಂಪತಿ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಏ.23ರಂದು ಬಂಧಿಸಲಾಗಿತ್ತು. ಮೇ 5ರಂದು ಇಬ್ಬರಿಗೂ ಇಲ್ಲಿಯ ವಿಶೇಷ ನ್ಯಾಯಾಲಯ  ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ ದಂಪತಿ ಷರತ್ತು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಜಾಮೀನನ್ನು ರದ್ದುಪಡಿಸುವಂತೆ ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಕುರಿತು ಬುಧವಾರ ನ್ಯಾಯಾಲಯಕ್ಕೆ ಪ್ರತಿಕ್ರಿಯಿಸಿದ ದಂಪತಿ, ‘ನ್ಯಾಯಾಲಯದ ಯಾವುದೇ ಷರತ್ತು ಉಲ್ಲಂಘಿಸಿಲ್ಲ. ಜಾಮೀನು ರದ್ದು ಕೋರಿರುವ ಪೊಲೀಸರು ಸಮರ್ಪಕ ಕಾರಣ ನೀಡುವಲ್ಲಿ ವಿಫಲರಾಗಿದ್ದಾರೆ’ ಎಂದು ಜಂಟಿ ಹೇಳಿಕೆ ದಾಖಲಿಸಿದ್ದಾರೆ. ಈ ಬೆನ್ನಲ್ಲೇ ‘ಮುಂದಿನ ವಿಚಾರಣೆವರೆಗೂ ದಂಪತಿ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳುವುದಿಲ್ಲ’ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಬಳಿಕ ನ್ಯಾಯಾಲಯವು ವಿಚಾರಣೆಯನ್ನು ಜೂನ್ 15ಕ್ಕೆ ಮುಂದೂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು