ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡದಲ್ಲೂ ಹನುಮ ಮೆರವಣಿಗೆ ವೇಳೆ ಕಲ್ಲು ತೂರಾಟ

Last Updated 17 ಏಪ್ರಿಲ್ 2022, 15:03 IST
ಅಕ್ಷರ ಗಾತ್ರ

ಡೆಹ್ರಾಡೂನ್: ಹನುಮ ಜಯಂತಿಯ ಪ್ರಯುಕ್ತ ಶನಿವಾರ ಸಂಜೆ ನಡೆದ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿದ ಘಟನೆ ಉತ್ತರಾಖಂಡದ ಹರಿದ್ವಾರ ಜಿಲ್ಲೆಯಲ್ಲೂ ನಡೆದಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಸಂಬಂಧ 13 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, 9 ಮಂದಿಯನ್ನು ಬಂಧಿಸಿದ್ದಾರೆ.

ಹರಿದ್ವಾರ ಜಿಲ್ಲೆಯ ರೂರ್ಕಿ ಬಳಿಯ ಭಗವಾನ್‌ಪುರದಲ್ಲಿ ಹನುಮ ಜಯಂತಿಯ ಮೆರವಣಿಗೆ ಆಗಮಿಸುತ್ತಿದ್ದಂತೆ, ಮನೆಗಳ ಮೇಲೆ ನಿಂತಿದ್ದವರು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದವರು ಕಕ್ಕಾಬಿಕ್ಕಿಯಾಗಿ ಓಡಿದ್ದರಿಂದ ಕಾಲ್ತುಳಿತದ ರೀತಿಯ ಘಟನೆಯೂ ನಡೆದಿದೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT