ಸೋಮವಾರ, ಜೂನ್ 27, 2022
21 °C

ಕೋವಿಡ್‌: 12ನೇ ತರಗತಿ ಪರೀಕ್ಷೆ ರದ್ದುಪಡಿಸಿದ್ದಕ್ಕೆ ಸುಪ್ರೀಂ ಕೋರ್ಟ್ ಸಂತಸ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇಂದ್ರ ಸರ್ಕಾರವು 12ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಿರುವುದು ಸಂತಸ ವಿಷಯವಾಗಿದೆ ಎಂದಿರುವ ಸುಪ್ರೀಂಕೋರ್ಟ್‌, ಮೌಲ್ಯಮಾಪನಕ್ಕಾಗಿ ಅಳವಡಿಸಿಕೊಳ್ಳುವ ವಸ್ತುನಿಷ್ಠ ಮಾನದಂಡಗಳ ಕುರಿತು ಎರಡು ವಾರಗಳಲ್ಲಿ ಮಾಹಿತಿ ನೀಡುವಂತೆ ಸಿಬಿಎಸ್‌ಇ ಮತ್ತು ಸಿಐಸಿಎಸ್‌ಇಗೆ ಗುರುವಾರ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರ ನ್ಯಾಯಪೀಠವು ಈ ಕುರಿತ ದಾಖಲೆಗಳನ್ನು ಎರಡು ವಾರಗಳಲ್ಲಿ ಸಲ್ಲಿಸುವಂತೆ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಮತ್ತು ಸಿಐಎಸ್‌ಸಿಇ ಪರ ವಕೀಲ ಜೆ.ಕೆ.ದಾಸ್ ಅವರಿಗೆ ಸೂಚಿಸಿತು.

ಹಲವು ವಿದ್ಯಾರ್ಥಿಗಳು ಭಾರತ ಮತ್ತು ವಿದೇಶಗಳಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯಲಿದ್ದಾರೆ. ಹಾಗಾಗಿ ಅವರ 12ನೇ ತರಗತಿಯ ಮೌಲ್ಯಮಾಪನ ವಿಧಾನಕ್ಕೆ ಅಳವಡಿಸಿಕೊಳ್ಳುವ ವಸ್ತುನಿಷ್ಠ ಮಾನದಂಡಗಳ ದಾಖಲೆಗಳನ್ನು ಸಲ್ಲಿಸಬೇಕು. ಇದಕ್ಕಾಗಿ ಹೆಚ್ಚಿನ ಅವಧಿ ಕೊಡಲು ಆಗದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು.

‘ಮಂಡಳಿಯ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿದಾರರು ಕೇಳಿದ ಪರಿಹಾರದಂತೆ ಇದೂ ಅಷ್ಟೇ ಮುಖ್ಯವಾಗಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಕೋವಿಡ್‌ ಪಿಡುಗು ವ್ಯಾಪಕವಾಗಿರುವ ಕಾರಣ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ಮಂಗಳವಾರ ರದ್ದುಪಡಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು.

ಇದನ್ನೂ ಓದಿ... ರಾಜಸ್ಥಾನದಲ್ಲಿ ರಾಜ್ಯ ಪಠ್ಯಕ್ರಮದ 10, 12ನೇ ತರಗತಿ ಪರೀಕ್ಷೆಗಳು ರದ್ದು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು