ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಗಾದಿ 2021: ಕನ್ನಡದಲ್ಲೇ ಟ್ವೀಟ್ ಮಾಡಿ ಶುಭಾಶಯ ಕೋರಿದ ಪ್ರಧಾನಿ ಮೋದಿ

Last Updated 13 ಏಪ್ರಿಲ್ 2021, 9:47 IST
ಅಕ್ಷರ ಗಾತ್ರ

ನವದೆಹಲಿ: ಯುಗಾದಿ ಹಬ್ಬದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಜನತೆಗೆ ಶುಭಾಶಯ ಕೋರಿದ್ದಾರೆ.

ಶುಭಾಶಯ ಕೋರಿ ಕನ್ನಡದಲ್ಲೇ ಟ್ವೀಟ್ ಮಾಡಿರುವ ಅವರು, ‘ನಿಮ್ಮೆಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗೂ ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ’ ಎಂದು ಉಲ್ಲೇಖಿಸಿದ್ದಾರೆ.

ಈ ಹಿಂದೆಯೂ ಹಲವು ಸಂದರ್ಭಗಳಲ್ಲಿ ಮೋದಿಯವರು ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ರಾಜ್ಯದ ಜನತೆಗೆ ಶುಭಾಶಯ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT