ಬುಧವಾರ, ಅಕ್ಟೋಬರ್ 5, 2022
26 °C

‘ಹರ್ ಘರ್ ತಿರಂಗಾ’ ಅಭಿಯಾನ: ತಮ್ಮ ನಿವಾಸದ ಮೇಲೆ ರಾಷ್ಟ್ರಧ್ವಜ ಹಾರಿಸಿದ ಅಮಿತ್ ಶಾ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕರೆ ನೀಡಿರುವ ‘ಹರ್ ಘರ್ ತಿರಂಗಾ’ ಅಭಿಯಾನ ಇಂದಿನಿಂದ ಆರಂಭವಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಳಗ್ಗೆ ಪತ್ನಿಯೊಂದಿಗೆ ತಮ್ಮ ನಿವಾಸದ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸಿದರು.

ಅಮಿತ್ ಶಾ ಅವರು ತಮ್ಮ ಪತ್ನಿಯೊಂದಿಗೆ ತ್ರಿವರ್ಣ ಧ್ವಜವನ್ನು ಹಾರಿಸುತ್ತಿರುವ ವಿಡಿಯೊವನ್ನು ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡಿದೆ. 'ಹರ್ ಘರ್ ತಿರಂಗ' ಅಭಿಯಾನವು 'ಆಜಾದಿ ಕಾ ಅಮೃತ್ ಮಹೋತ್ಸವ'ದ ಭಾಗವಾಗಿದೆ.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೇಶದ ನಾಗರಿಕರೆಲ್ಲರೂ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜಗಳನ್ನು ಹಾರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಅಲ್ಲದೇ, ತಮ್ಮ ಸಾಮಾಜಿಕ ಮಾಧ್ಯಮಗಳ ಪ್ರೊಫೈಲ್‌ನಲ್ಲಿ ತಿರಂಗಾ ಚಿತ್ರವನ್ನು ಹಾಕಿಕೊಳ್ಳುವಂತೆ ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಎಲ್ಲ ಸರ್ಕಾರಿ ಕಚೇರಿಗಳ ಮೇಲೂ ತ್ರಿವರ್ಣ ಧ್ವಜ ಹಾರಿಸಲಾಗುತ್ತಿದೆ.

‘ಹರ್ ಘರ್ ತಿರಂಗಾ’ ಅಭಿಯಾನದ ಕುರಿತು ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ಇತರ ಪಾಲುದಾರರಲ್ಲಿ ಜಾಗೃತಿ ಮೂಡಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗವು (ಯುಜಿಸಿ) ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿತ್ತು.

‘ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ, ನಾಗರಿಕರು ತಮ್ಮ ಮನೆಗಳಲ್ಲಿ ಭಾರತದ ರಾಷ್ಟ್ರಧ್ವಜವನ್ನು ಹಾರಿಸುವಂತೆ ಉತ್ತೇಜಿಸಲು ‘ಹರ್ ಘರ್ ತಿರಂಗ’ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಜನರಲ್ಲಿ ದೇಶಭಕ್ತಿಯ ಭಾವನೆಯನ್ನು ತುಂಬುವುದು ಈ ಅಭಿಯಾನದ ಉದ್ದೇಶವಾಗಿದ್ದು, ಭಾರತದ ಇತಿಹಾಸ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಿದವರನ್ನು ನೆನಪಿಸಿಕೊಳ್ಳಿ’ ಎಂದು ಯುಜಿಸಿ ಹೇಳಿತ್ತು.

ಸಂಸ್ಕೃತಿ ಸಚಿವಾಲಯವು www.hargartiranga.com ಎಂಬ ವೆಬ್‌ಸೈಟ್ ಅಭಿವೃದ್ಧಿಪಡಿಸಿದ್ದು, ಅಲ್ಲಿ ನಾಗರಿಕರು ಧ್ವಜವನ್ನು ಅಪ್‌ಲೋಡ್‌ ಮಾಡಲು ಮತ್ತು ತ್ರಿವರ್ಣ ಧ್ವಜದೊಂದಿಗಿನ ಭಾವಚಿತ್ರ ಅಪ್‌ಲೋಡ್ ಮಾಡಲು ಪ್ರೋತ್ಸಾಹಿಸಲಾಗುತ್ತಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು