ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಲಿಸ್ತಾನ ಉಗ್ರರನ್ನು ಸ್ಮರಿಸಿ ಗೌರವ ಸಲ್ಲಿಸಿದ ಹರಭಜನ್; ವಿವಾದ ಸೃಷ್ಟಿ

ಅಕ್ಷರ ಗಾತ್ರ

ಅಮೃತಸರ: ಭಾರತೀಯ ಕ್ರಿಕೆಟಿಗ, ಆಫ್ ಸ್ಪಿನ್ನರ್ ಹರಭಜನ್ ಸಿಂಗ್, ಖಲಿಸ್ತಾನ ಉಗ್ರರನ್ನು ಸ್ಮರಿಸಿ ಗೌರವ ಸಲ್ಲಿಸುವ ಮೂಲಕ ಭಾರಿ ವಿವಾದಕ್ಕೆ ಒಳಗಾಗಿದ್ದಾರೆ.

'ಆಪರೇಷನ್ ಬ್ಲೂಸ್ಟಾರ್' 37ನೇ ವರ್ಷಾಚರಣೆಯ ಭಾಗವಾಗಿ ಹರ್ಭಜನ್ ಸಿಂಗ್, ಖಲಿಸ್ತಾನ ಉಗ್ರರನ್ನು ಹುತ್ಮಾತರೆಂದು ಬಿಂಬಿಸಿ ಸ್ಮರಿಸಿದ್ದರು. ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಚಿತ್ರ ಸಮೇತ ಸ್ಟೇಟಸ್ ಸಹ ಹಾಕಿರುವುದು ವರದಿಯಾಗಿದೆ.

1984ರ 'ಆಪರೇಷನ್ ಬ್ಲೂಸ್ಟಾರ್' ಸೇನಾ ಕಾರ್ಯಾಚರಣೆಯಲ್ಲಿ ಪಂಜಾಬ್‌ನ ವಿಶ್ವ ಪ್ರಸಿದ್ಧ ಸ್ವರ್ಣ ಮಂದಿರದಲ್ಲಿ ಅಡಗಿದ್ದ ಖಲಿಸ್ತಾನ ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಇದರಂತೆ ಭಾನುವಾರ 37ನೇ ವರ್ಷಾಚರಣೆಯನ್ನು ಆಚರಿಸಲಾಗಿದೆ. ಅಂದು ನಡೆದ ಸೇನಾ ಕಾರ್ಯಾಚರಣೆಯಲ್ಲಿ ಜರ್ನೈಲ್ ಸಿಂಗ್ ಬಿಂದ್ರನ್‌ವಾಲಾ ಸೇರಿದಂತೆ ಖಲಿಸ್ತಾನ ಪ್ರತ್ಯೇಕತಾವಾದಿಗಳನ್ನು ಹತ್ಯೆಗೈಯಲಾಗಿತ್ತು.

ಈಗ ಸ್ಟೇಟಸ್ ಹಾಕಿರುವುದುಕ್ಕೆ ಸಂಬಂಧಿಸಿದಂತೆ ಹರಭಜನ್ ಸಿಂಗ್ ತಕ್ಷಣಕ್ಕೆ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ. ಅತ್ತ ಸಾಮಾಜಿಕ ಮಾಧ್ಯಮಗಳಲ್ಲಿ ಹರಭಜನ್ ವಿರುದ್ಧ ಭಾರಿ ಟೀಕೆ ವ್ಯಕ್ತವಾಗಿದ್ದು, ದೇಶದ್ರೋಹ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT