ಶನಿವಾರ, ಮೇ 28, 2022
26 °C

ರಾಜ್ಯಸಭಾ ವೇತನ ರೈತರ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ವಿನಿಯೋಗ: ಹರಭಜನ್‌ ಸಿಂಗ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚಂಡೀಗಡ: ರಾಜ್ಯಸಭಾ ಸದಸ್ಯ ಹಾಗೂ ಮಾಜಿ ಕ್ರಿಕೆಟಿಗ ಹರಭಜನ್‌ ಸಿಂಗ್‌ ಅವರು ತಮಗೆ ಸಿಗುವ ವೇತನವನ್ನು ರೈತರ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೀಡುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ‘ನಾನು ಒಬ್ಬ ಸಂಸದನಾಗಿ, ನನ್ನ ರಾಜ್ಯಸಭಾ ವೇತನವನ್ನು ರೈತರ ಹೆಣ್ಣುಮಕ್ಕಳ ಶಿಕ್ಷಣ ಹಾಗೂ ಕಲ್ಯಾಣಕ್ಕೆ ಮೀಸಲಿಡಬೇಕೆಂದುಕೊಂಡಿದ್ದೇನೆ. ನಮ್ಮ ದೇಶದ ಸುಧಾರಣೆಗೆ ಕೊಡುಗೆ ನೀಡಲೆಂದೇ ನಾನು ರಾಜಕೀಯಕ್ಕೆ ಸೇರಿದ್ದೇನೆ. ದೇಶದ ಸುಧಾರಣೆಗೆ ನನ್ನ ಕೈಲಾದಷ್ಟು ಶ್ರಮಿಸುತ್ತೇನೆ. ಜೈ ಹಿಂದ್’ ಎಂದು ಹೇಳಿದ್ದಾರೆ.

ಕಳೆದ ತಿಂಗಳಷ್ಟೇ ಹರಭಜನ್‌ ಸಿಂಗ್‌ ಪಂಜಾಬ್‌ನಿಂದ ಎಎಪಿ ಅಭ್ಯರ್ಥಿಯಾಗಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು