ಶನಿವಾರ, ಮೇ 28, 2022
21 °C

ಹಾರ್ದಿಕ್ ಪಟೇಲ್ ಕಾಂಗ್ರೆಸ್‌ಗೆ ವಿದಾಯ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಹಮದಾಬಾದ್‌: ಮುಂಬರುವ ವಿಧಾನಸಭಾ ಚುನಾವಣೆಗೂ ಮೊದಲೇ ಗುಜರಾತ್ ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಇದೆ. ಕಾರಣ, ಪಕ್ಷದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್, ಪಾಟೀದಾರ್ ಮೀಸಲಾತಿ ಆಂದೋಲನದ ನಾಯಕ ಯಾವುದೇ ಕ್ಷಣದಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

ಈ ವಾರದ ಆರಂಭದಲ್ಲಿ ಕೇಂದ್ರ ಗುಜರಾತ್‌ನ ದಾಹೋಡ್‌ನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರ ಜತೆ ಕೊನೆ ಬಾರಿಗೆ ಕಾಣಿಸಿಕೊಂಡಿದ್ದ ಪಾಟೀದಾರ್ ನಾಯಕ ಹಾರ್ದಿಕ್‌, ‘ಪಕ್ಷದವರೇ ನನ್ನನ್ನು ನಿರ್ಲಕ್ಷಿಸಿ, ಮೂಲೆಗುಂಪು ಮಾಡುತ್ತಿದ್ದಾರೆ’ ಎಂದು ಬಹಿರಂಗವಾಗಿ ಟೀಕಿಸಿದ್ದಾರೆ. ರಾಹುಲ್‌ ಗಾಂಧಿಯವರಿಂದ ‘ತೇಜೋವಧೆ’ಗೆ ಒಳಗಾದ ನಂತರ ಹಾರ್ದಿಕ್‌ ಪಕ್ಷ ತೊರೆಯುವ ಮನಸು ಮಾಡಿದ್ದಾರೆ ಎನ್ನಲಾಗಿದೆ.

‘ಹಾರ್ದಿಕ್ ಮತ್ತು ಕಾಂಗ್ರೆಸ್ ನಡುವಿನ ಬಿಕ್ಕಟ್ಟು ಶಮನವಾಗುವ ಲಕ್ಷಣ ಕಾಣಿಸುತ್ತಿಲ್ಲ. ರಾಜಸ್ಥಾನದ ಉದಯಪುರದಲ್ಲಿ ಆಯೋಜನೆಯಾಗಿರುವ ಪಕ್ಷದ ಮೂರು ದಿನಗಳ ಚಿಂತನ-ಮಂಥನ ಅಧಿವೇಶನದಿಂದ ಹಾರ್ದಿಕ್ ಹೊರಗುಳಿಯಲಿದ್ದಾರೆ’ ಎಂದು ಹಾರ್ದಿಕ್‌ ಅವರ ನಿಕಟವರ್ತಿಗಳ ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು