ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಕರಣ ಹಿಂಪಡೆಯದಿದ್ದರೆ ಮತ್ತೆ ಪ್ರತಿಭಟನೆ: ಹಾರ್ದಿಕ್‌ ಪಟೇಲ್‌ ಎಚ್ಚರಿಕೆ

Last Updated 21 ಫೆಬ್ರುವರಿ 2022, 14:34 IST
ಅಕ್ಷರ ಗಾತ್ರ

ಅಹಮದಾಬಾದ್‌: 2015ರ ಪಾಟಿದಾರ್‌ ಮೀಸಲಾತಿ ಹೋರಾಟದಲ್ಲಿ ಪಾಲ್ಗೊಂಡವರ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣಗಳನ್ನು ಗುಜರಾತ್‌ನ ಬಿಜೆಪಿ ಸರ್ಕಾರ ಮಾರ್ಚ್‌ 23ರೊಳಗೆ ಹಿಂಪಡೆಯದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಪಾಟಿದಾರ್‌ ಮುಖಂಡ ಹಾಗೂ ಗುಜರಾತ್‌ನ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಹಾರ್ದಿಕ್‌ ಪಟೇಲ್‌ ಸೋಮವಾರ ಎಚ್ಚರಿಕೆ ನೀಡಿದ್ದಾರೆ.

ಹಾರ್ದಿಕ್‌ ಪಟೇಲ್‌ ಮತ್ತು ಅವರ ಪಕ್ಷವು ಗುಜರಾತ್‌ನಲ್ಲಿ ನೆಲೆ ಕಳೆದುಕೊಂಡಿದೆ. ಮಾಧ್ಯಮಗಳ ಗಮನ ಸೆಳೆಯಲು ಅವರು ಇಂತಹ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಗುಜರಾತ್‌ನ ಬಿಜೆಪಿ ವಕ್ತಾರ ರುತ್ವಿಜ್‌ ಪಟೇಲ್‌ ಹೇಳಿದ್ದಾರೆ.

ಗುಜರಾತ್‌ನಲ್ಲಿ ಈ ವರ್ಷ ಡಿಸೆಂಬರ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಪಾಟಿದಾರ್‌ ಸಮುದಾಯದವರು ಇಲ್ಲಿ ಬಹುಸಂಖ್ಯೆಯಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT