ಶನಿವಾರ, ಡಿಸೆಂಬರ್ 4, 2021
20 °C

ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ ಅವರಿಗೆ ಮಾತೃವಿಯೋಗ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ ಅವರ ತಾಯಿ ಸ್ನೇಹಲತಾ ಗೋಯೆಲ್ (89) ಅವರು ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

‘ನಮ್ಮ ತಾಯಿಯವರ ಅಪೇಕ್ಷೆಯಂತೆ, ಅವರ ಕಣ್ಣುಗಳನ್ನು ಅಖಿಲ ಭಾರತ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಹಾಗೂ ಅವರ ದೇಹವನ್ನು ಮೌಲಾನಾ ಅಝಾದ್ ವೈದ್ಯಕೀಯ ಕಾಲೇಜಿಗೆ ದಾನ ಮಾಡುವುದಾಗಿ‘ ಸಚಿವರು ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ. ‘ತಮ್ಮ ತಾಯಿಯವರ ದೇಹದಾನದ ಕ್ರಮ ಸಮಾಜಕ್ಕೆ ಸ್ಪೂರ್ತಿಯಾಗಲಿ‘ ಎಂದು ಅವರು ತಿಳಿಸಿದ್ದಾರೆ.

‘ಈ ಭೂಮಿಯ ಮೇಲೆ ನಾನು ಅತ್ಯಂತ ಪ್ರೀತಿಸುತ್ತಿದ್ದ ವ್ಯಕ್ತಿ ನನ್ನ ತಾಯಿ. ಈಗ ಅವರು ನನ್ನನ್ನು ಬಿಟ್ಟು ಹೋಗಿದ್ದಾರೆ. ಅವರದು ಬಹಳ ಅತ್ಯುನ್ನತ ವ್ಯಕ್ತಿತ್ವ. ಅವರೊಬ್ಬ ತತ್ವಜ್ಞಾನಿ ಮತ್ತು ನನ್ನ ಮಾರ್ಗದರ್ಶಿಯಾಗಿದ್ದರು. ಅವರ ಅಗಲಿಕೆಯಿಂದ ನನಗೆ ತುಂಬಲಾರದ ನಷ್ಟವಾಗಿದೆ. ಆ ನಷ್ಟವನ್ನು ಯಾರೂ ತುಂಬಿಕೊಡಲಾರರು. ಅವರ ಆತ್ಮಕ್ಕೆ ಶಾಂತಿ ಸಿಗಲಿ‘ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು