ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಯಾಣದಲ್ಲಿ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

Haryana cancels class 10 board exams, postpones class 12 exams
Last Updated 15 ಏಪ್ರಿಲ್ 2021, 12:35 IST
ಅಕ್ಷರ ಗಾತ್ರ

ಚಂಡೀಗಢ: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಹರಿಯಾಣ ಸರ್ಕಾರವು 10ನೇ ತರಗತಿಯ ಪರೀಕ್ಷೆಗಳನ್ನು ಗುರುವಾರ ರದ್ದುಗೊಳಿಸಿದ್ದು, 12ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಿದೆ.

‘ಹರಿಯಾಣದಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹಾಗಾಗಿ, ಸಿಬಿಎಸ್‌ಸಿಯ ಕೈಗೊಂಡ ನಿರ್ಧಾರವನ್ನು ಹರಿಯಾಣ ಸರ್ಕಾರವೂ ಅನುಸರಿಸಿದೆ’ ಎಂದು ಶಿಕ್ಷಣ ಸಚಿವ ಕನ್ವರ್ ಪಾಲ್ ತಿಳಿಸಿದ್ದಾರೆ.

‘ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನದ ಆಧಾರದಲ್ಲಿ 10ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಲಾಗುವುದು’ ಎಂದೂ ಅವರು ಹೇಳಿದ್ದಾರೆ.

ಹರಿಯಾಣದಲ್ಲಿ ರಾಜ್ಯ ಪ್ರೌಢಶಿಕ್ಷಣ ಮಂಡಳಿಯ ಪರೀಕ್ಷೆಗಳು ಏ‌ಪ್ರಿಲ್‌ನಲ್ಲಿ ಶುರುವಾಗಿ ಮೇ ತಿಂಗಳ ಮಧ್ಯಭಾಗದಲ್ಲಿ ಮುಕ್ತಾಯವಾಗಬೇಕಿತ್ತು.

ಸಿಬಿಎಸ್‌ಸಿಯು ಇದೇ ಮೊದಲ ಬಾರಿಗೆ ಬೋರ್ಡ್ ಪರೀಕ್ಷೆಗಳನ್ನು ಪೂರ್ಣಪ್ರಮಾಣದಲ್ಲಿ ರದ್ದುಗೊಳಿಸಿದೆ. ಈ ಹಿಂದೆ ದೆಹಲಿಯಲ್ಲಿ ನಡೆದ ಹಿಂಸಾಚಾರ ಹಾಗೂ ಕೋವಿಡ್ ಪ್ರಕರಣಗಳ ಹೆಚ್ಚಳದ ಸಂದರ್ಭದಲ್ಲಿ ಪರೀಕ್ಷೆಗಳನ್ನು ಭಾಗಶಃ ರದ್ದಗೊಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT