ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಸಿಕೆ ಹಾಕಿಸಿಕೊಳ್ಳದವರಿಗೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶವಿಲ್ಲ: ಹರಿಯಾಣ ಸರ್ಕಾರ

Last Updated 24 ಡಿಸೆಂಬರ್ 2021, 16:32 IST
ಅಕ್ಷರ ಗಾತ್ರ

ಚಂಡೀಗಡ: ಕೋವಿಡ್‌–19 ಲಸಿಕೆ ಹಾಕಿಸಿಕೊಳ್ಳದವರು ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಿಸುವುದನ್ನು ನಿರ್ಬಂಧಿಸುತ್ತಿರುವುದಾಗಿ ಹರಿಯಾಣ ಸರ್ಕಾರ ಶುಕ್ರವಾರ ಪ್ರಕಟಿಸಿದೆ. 2022ರ ಜನವರಿ 1ರಿಂದ ನಿರ್ಬಂಧ ಜಾರಿಯಾಗಲಿದೆ.

ದೇಶದಲ್ಲಿ ಓಮೈಕ್ರಾನ್‌ ಪ್ರಕರಣಗಳ ಏರಿಕೆ ಮತ್ತು ಸೋಂಕು ಸಾಂಕ್ರಾಮಿಕವಾಗುವುದನ್ನು ತಡೆಯುವ ನಿಟ್ಟಿನಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ಹರಿಯಾಣ ಸರ್ಕಾರ ನಿರ್ಧರಿಸಿದೆ. ನಾಳೆಯಿಂದ ರಾತ್ರಿ 11ರಿಂದ ಬೆಳಿಗ್ಗೆ 5ರವೆಗೂ ಕರ್ಫ್ಯೂ ಜಾರಿಯಲ್ಲಿರಲಿದೆ.

ಲಸಿಕೆಯ ಎರಡೂ ಡೋಸ್‌ ಹಾಕಿಸಿಕೊಳ್ಳದವರಿಗೆ ಮಾಲ್‌ಗಳು, ಸಿನಿಮಾ ಹಾಲ್‌ಗಳು ಹಾಗೂ ರೆಸ್ಟೊರೆಂಟ್‌ಗಳಿಗೆ ಪ್ರವೇಶಿಸುವುದಕ್ಕೆ ಅವಕಾಶ ನಿರ್ಬಂಧಿಸುತ್ತಿರುವುದಾಗಿ ಹರಿಯಾಣ ಸರ್ಕಾರ ಹೇಳಿದೆ.

ಈಗಾಗಲೇ ಉತ್ತರ ಪ್ರದೇಶ ಮತ್ತು ಮಧ್ಯ ಪ್ರದೇಶ ಸರ್ಕಾರಗಳೂ ಸಹ ರಾತ್ರಿ ಕರ್ಫ್ಯೂ ನಿರ್ಧಾರ ಪ್ರಕಟಿಸಿದ್ದು, ಗುಜರಾತ್‌ನಲ್ಲೂ ಕೋವಿಡ್‌–19 ಪರಿಸ್ಥಿತಿ ನಿಯಂತ್ರಿಸುವ ನಿಟ್ಟಿನಲ್ಲಿ ರಾತ್ರಿ ಕರ್ಫ್ಯೂ ಅವಧಿ ವಿಸ್ತರಿಸಲಾಗಿದೆ. ಗುಜರಾತ್‌ನ ಅಹಮದಾಬಾದ್‌, ವಡೋದರಾ, ಸೂರತ್‌, ರಾಜ್‌ಕೋಟ್‌, ಭಾವನಗರ್‌, ಜಾಮ್ನಗರ್‌, ಗಾಂಧಿನಗರ ಹಾಗೂ ಜುನಾಗಡದಲ್ಲಿ ರಾತ್ರಿ ಕರ್ಫ್ಯೂ ಅವಧಿ ವಿಸ್ತರಣೆ ಅನ್ವಯವಾಗಲಿದೆ.

'ಓಮೈಕ್ರಾನ್‌ ಸೋಂಕು ಪ್ರಕರಣಗಳು ಒಂದೂವರೆ ದಿನದಿಂದ 3 ದಿನಗಳಲ್ಲಿ ದುಪ್ಪಟ್ಟಾಗುತ್ತವೆ, ಹೀಗಾಗಿ ಕೋವಿಡ್‌ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು' ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT