ಶನಿವಾರ, ಸೆಪ್ಟೆಂಬರ್ 25, 2021
29 °C

ಹರಿಯಾಣದಲ್ಲಿ ಕೆಲವು ನಿಯಮಗಳ ಸಡಿಲಿಕೆಯೊಂದಿಗೆ ಆ.2ರವರೆಗೆ ಲಾಕ್‌ಡೌನ್ ಮುಂದುವರಿಕೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಚಂಡೀಗಡ: ಹರಿಯಾಣ ಸರ್ಕಾರವು ಕೋವಿಡ್‌ ನಿಯಂತ್ರಣದ ಸಲುವಾಗಿ ಹೇರಿರುವ ಲಾಕ್‌ಡೌನ್‌ ಅನ್ನು ಆಗಸ್ಟ್‌ 2 ರವರೆಗೆ ಮುಂದುವರಿಸಲು ನಿರ್ಧರಿಸಿದ್ದು, ಕೆಲವು ನಿಯಮಗಳನ್ನು ಸಡಿಲಿಸಿದೆ.

ಹೊಸ ಆದೇಶದ ಪ್ರಕಾರ ರೆಸ್ಟೋರೆಂಟ್‌ಗಳು ಶೇ. 50 ಆಸನ ಸಾಮರ್ಥ್ಯದೊಂದಿಗೆ ಮತ್ತು ಮಾಲ್‌ಗಳನ್ನು ಬೆಳಿಗ್ಗೆ 10 ರಿಂದ ರಾತ್ರಿ 8ರ ವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಎಲ್ಲ ಅಂಗಡಿಗಳು ಬೆಳಿಗ್ಗೆ 9ರಿಂದ ರಾತ್ರಿ 8ರವರೆಗೆ ತೆರೆಯಲು ಅನುಮತಿ ಇದೆ.

ʼಹೊಸ ಸೋಂಕು ಪ್ರಕರಣಗಳು ಇಳಿಮುಖವಾಗಿದ್ದರೂ ಸಹ, ಸಾಂಕ್ರಾಮಿಕವನ್ನು ತಡೆಗಟ್ಟುವ ಸಲುವಾಗಿ ನಿಯಂತ್ರಣ ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಇನ್ನೂ ಒಂದುವಾರ ವಿಸ್ತರಿಸಲಾಗಿದೆ. ಅಂದರೆ, ಜುಲೈ 26ರ ಬೆಳಿಗ್ಗೆ 5ರಿಂದ ಆಗಸ್ಟ್‌ 2ರ ಬೆಳಿಗ್ಗೆ 5ರವರೆಗೆ ರಾಜ್ಯದಲ್ಲಿ ಲಾಕ್‌ಡೌನ್‌ ಮುಂದುವರಿಯಲಾಗುವುದುʼ ಎಂದು ತಿಳಿಸಲಾಗಿದೆ.

ರಾಜ್ಯದಲ್ಲಿ ಮೇ 3ರಿಂದ ಲಾಕ್‌ಡೌನ್‌ ಜಾರಿಯಲ್ಲಿದೆ.

ವಾರದ ಎಲ್ಲ ದಿನಗಳಲ್ಲಿಯೂ ರಾತ್ರಿ (11 ರಿಂದ ಬೆಳಿಗ್ಗೆ 5ರ ವರೆಗೆ) ಕರ್ಫ್ಯೂ ಜಾರಿಯಲ್ಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು