ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹರ್ ಘರ್ ತಿರಂಗಾ’ಅಭಿಯಾನ: ಹರಿಯಾಣ ಜೈಲುಗಳಲ್ಲಿ 25,000 ರಾಷ್ಟ್ರಧ್ವಜ ತಯಾರಿ

Last Updated 4 ಆಗಸ್ಟ್ 2022, 16:39 IST
ಅಕ್ಷರ ಗಾತ್ರ

ಚಂಡೀಗಡ: ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಹರಿಯಾಣದ ಸಿರ್ಸಾ, ಹಿಸಾರ್ ಮತ್ತು ರೋಹ್ಟಕ್ ಜೈಲುಗಳ ಕೈದಿಗಳು 25,000 ರಾಷ್ಟ್ರಧ್ವಜಗಳನ್ನು ಸಿದ್ಧಪಡಿಸಲಿದ್ದಾರೆ.

ವಿದ್ಯುತ್ ಮತ್ತು ಜೈಲು ಖಾತೆ ಸಚಿವ ರಂಜಿತ್ ಸಿಂಗ್ ಚೌಟಾಲ ಈ ಬಗ್ಗೆ ಮಾಹಿತಿ ನೀಡಿದ್ದು, 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷವಾಗಿಸಲು ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವಂತೆ ಕರೆ ನೀಡಿದ್ದಾರೆ.

‘75ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವುದನ್ನು ಉತ್ತೇಜಿಸುವ ದೃಷ್ಟಿಯಿಂದ ಪ್ರಧಾನಿ ನರೇಂದ್ರಮೋದಿ, ‘ಹರ್ ಘರ್ ತಿರಂಗಾ’ಅಭಿಯಾನ ಆರಂಭಿಸಿದರು. ಈ ಹಿಂದೆ ರಾಷ್ಟ್ರೀಯ ಹಬ್ಬಗಳು ಮತ್ತು ವಿಶೇಷ ಸಂದರ್ಭಗಳಲ್ಲಿ ಮಾತ್ರ ರಾಷ್ಟ್ರಧ್ವಜ ಹಾರಿಸಲಾಗುತ್ತಿತ್ತು. ಈ ಹೊಸ ಹೆಜ್ಜೆಯು ದೇಶದ ಬಗ್ಗೆ ಜನರಲ್ಲಿ ಬದ್ಧತೆಯನ್ನು ಸೃಷ್ಟಿಸುತ್ತದೆ’ ಎಂದು ಸಿರ್ಸಾದಲ್ಲಿ ತಮ್ಮ ಮನೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿ ಅವರು ಮಾತನಾಡಿದರು.

ಈ ವರ್ಷ ನಾವು ‘ಆಜಾದಿ ಕಾ ಅಮೃತ ಮಹೋತ್ಸವ’ದ ಸಂಭ್ರಮದಲ್ಲಿದ್ದೇವೆ. ಹರ್ ಘರ್ ತಿರಂಗಾ ಅಭಿಯಾನವನ್ನು ಬಲಪಡಿಸೋಣ ಬನ್ನಿ. ಆಗಸ್ಟ್ 13ರಿಂದ 15ರ ನಡುವೆ ನಿಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿ. ಈ ಅಭಿಯಾನವು ರಾಷ್ಟ್ರಧ್ವಜದ ಜೊತೆಗಿನ ನಮ್ಮ ಸಂಪರ್ಕವನ್ನು ಗಾಢಗೊಳಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT