ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಯಾಣ: ಲಾಕ್‌ಡೌನ್ ವೇಳೆ ಕೆಲಸ ಕಳೆದುಕೊಂಡಿದ್ದ ವ್ಯಕ್ತಿಯಿಂದ ತರಕಾರಿ ಮಾರಾಟ

Last Updated 5 ಸೆಪ್ಟೆಂಬರ್ 2020, 3:16 IST
ಅಕ್ಷರ ಗಾತ್ರ

ರೋಹ್ಟಕ್: ಕೋವಿಡ್‌–19 ಲಾಕ್‌ಡೌನ್‌ ಸಂದರ್ಭದಲ್ಲಿ ಕೆಲಸ ಕಳೆದುಕೊಂಡಿದ್ದ ಹರಿಯಾಣದ ವ್ಯಕ್ತಿಯೊಬ್ಬರು ಜೀವನ ನಿರ್ವಹಣೆಗಾಗಿ ತರಕಾರಿ ಮಾರಾಟ ಆರಂಭಿಸಿದ್ದಾರೆ.

ಖಾಸಗಿ ಕಂಪೆನಿಯೊಂದರಲ್ಲಿ ಘಟಕದ ಮುಖ್ಯಸ್ಥರಾಗಿದ್ದ ರಿಂಕು ಎನ್ನುವವರು ತರಕಾರಿ ಮಾರಾಟ ಆರಂಭಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ‘ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವ ಸಲುವಾಗಿ ತರಕಾರಿ ಮಾರಾಟ ಆರಂಭಿಸಬೇಕಾಯಿತು. ಖಾಸಗಿ ವಲಯವು ಸಂಕಷ್ಟಕ್ಕೆ ಸಿಲುಕಿದೆ. ಅಲ್ಲಿ ಕೆಲಸವೇ ಇಲ್ಲದಂತಾಗಿದೆ. ಹೆಚ್ಚಿನ ಆಯ್ಕೆಗಳು ಇಲ್ಲವಾದ್ದರಿಂದ ನನ್ನ ಸ್ನೇಹಿತರೂ ತರಕಾರಿ ಮಾರುತ್ತಿದ್ದಾರೆ. ಕುಟುಂಬದವರಿಗಾಗಿ ಈ ಕೆಲಸ ಮಾಡುತ್ತಿದ್ದೇನೆ’ ಎಂದು ಹೇಳಿದ್ದಾರೆ.

ಮಾರ್ಚ್‌ ತಿಂಗಳಲ್ಲಿ ಲಾಕ್‌ಡೌನ್‌ ಆರಂಭವಾದ ಬಳಿಕ ಸಾಕಷ್ಟು ವ್ಯವಹಾರಗಳಿಗೆ ಹೊಡೆತ ಬಿದ್ದಿದೆ. ಸದ್ಯ ಲಾಕ್‌ಡೌನ್‌ ಸಡಿಲಿಸಿ, ಎಂದಿನಂತೆ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆದಾಗ್ಯೂ ಪರಿಸ್ಥಿತಿ ಸುಧಾರಿಸಬೇಕಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟು 13,470 ಕೋವಿಡ್‌–19 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. 740 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT