ಭಾನುವಾರ, ಮಾರ್ಚ್ 26, 2023
24 °C

ಪೆಟ್ರೊಲ್, ಡೀಸೆಲ್‌ ಮೇಲಿನ ವ್ಯಾಟ್ ಕಡಿತಕ್ಕೆ ಹರಿಯಾಣ ಸರ್ಕಾರ ನಿರ್ಧಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚಂಡಿಗಡ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ, ಹರಿಯಾಣ ಸರ್ಕಾರ ಗುರುವಾರ ಇಂಧನಗಳ ಮೇಲಿನ ‘ವ್ಯಾಟ್‌‘ ಕಡಿತಗೊಳಿಸುವುದಾಗಿ ಪ್ರಕಟಿಸಿದ್ದು, ಪ್ರತಿ ಲೀಟರ್‌ ಮೇಲೆ ₹ 12 ರಷ್ಟು ಕಡಿಮೆ ಮಾಡಲಾಗುತ್ತಿದೆ ಎಂದು ಹೇಳಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ‘ದೀಪಾವಳಿ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆ ಮಾಡುವುದಾಗಿ ಘೋಷಿಸಿದೆ. ಇದರ ಮುಂದುವರಿದ ಭಾಗವಾಗಿ, ನಮ್ಮ ಸರ್ಕಾರ ಕೂಡ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ದರವನ್ನು ಕಡಿಮೆ ಮಾಡಿದೆ‘ ಎಂದು ಹೇಳಿದ್ದಾರೆ.

‘ಈ ಮೂಲಕ ಪ್ರಸ್ತುತ ಹರಿಯಾಣದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್‌ ಪ್ರತಿ ಲೀಟರ್‌ ದರ ₹12 ರಷ್ಟು ಕಡಿಮೆಯಾಗಲಿದೆ ಎಂದು ಖಟ್ಟರ್‌ ಟ್ವೀಟ್‌ ಮಾಡಿದ್ದಾರೆ.

ಕೇಂದ್ರ ಸರ್ಕಾರ ಬುಧವಾರ ಪೆಟ್ರೊಲ್‌ ಮತ್ತು ಡೀಸೆಲ್‌ ಪ್ರತಿ ಲೀಟರ್‌ ಮೇಲೆ ಕ್ರಮವಾಗಿ ₹5 ಮತ್ತು ₹ 10 ಅಬಕಾರಿ ಸುಂಕ ಕಡಿತಗೊಳಿಸುವುದಾಗಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಎರಡೂ ತೈಲದ ಮೇಲಿನ ವ್ಯಾಟ್ ಕಡಿತಗೊಳಿಸುವುದಾಗಿ ಘೋಷಿಸಿತ್ತು. ಈ ನಿರ್ಧಾರದಿಂದಾಗಿ ಪ್ರತಿ ಲೀಟರ್‌ಗೆ ₹ 12ರಷ್ಟು ಕಡಿತಗೊಳ್ಳುತ್ತದೆ ಎಂದು ಸರ್ಕಾರ ಪ್ರಕಟಿಸಿತ್ತು. ನಂತರ ಬಿಜೆಪಿ ಆಡಳಿತವಿರುವ ಕೆಲವು ರಾಜ್ಯಗಳಲ್ಲಿ ಪೆಟ್ರೊಲ್, ಡೀಸೆಲ್ ಮೇಲಿನ ತೆರಿಗೆಯನ್ನು ತಗ್ಗಿಸುವುದಾಗಿ ಘೋಷಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು