ಸೋಮವಾರ, ಮಾರ್ಚ್ 27, 2023
22 °C

ಚಂಡೀಗಡ: ಗಣೇಶ ವಿಸರ್ಜನೆ ವೇಳೆ 6 ಯುವಕರ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಚಂಡೀಗಡ: ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಂದರ್ಭದಲ್ಲಿ 6 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹರಿಯಾಣದ ಮಹೇಂದರ್‌ಗಢ ಹಾಗೂ ಸೋನಿಪತ್ ಜಿಲ್ಲೆಗಳಲ್ಲಿ ಶುಕ್ರವಾರ ಸಂಜೆ ನಡೆದಿದೆ. 

ಮಹೇಂದರ್‌ಗಢದಲ್ಲಿ 7 ಅಡಿಯ ಗಣೇಶ ವಿಸರ್ಜನೆ ಮಾಡುವಾಗ 9 ಯುವಕರು ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಈ ವೇಳೆ ರಾಷ್ಟ್ರೀಯ ವಿಪತ್ತು ನಿಗ್ರಹ ದಳದ ನೆರವಿನೊಂದಿಗೆ ಜಿಲ್ಲಾಡಳಿತ ಕಾರ್ಯಾಚರಣೆ ಕೈಗೊಂಡು, 5 ಮಂದಿ ಯುವಕರನ್ನು ರಕ್ಷಿಸಿದೆ. ಉಳಿದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. 

ಇನ್ನು, ಸೋನಿಪತ್ ಜಿಲ್ಲೆಯ ಯಮುನಾ ನದಿಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು