ಶುಕ್ರವಾರ, ಮೇ 20, 2022
24 °C

ದ್ವೇಷ ಭಾಷಣ ಪ್ರಕರಣ: ಜಂತರ್‌ ಮಂತರ್‌ನ ರ‍್ಯಾಲಿ ಆಯೋಜಕ ಪ್ರೀತ್ ಸಿಂಗ್‌ಗೆ ಜಾಮೀನು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‌ಕಳೆದ ತಿಂಗಳು ಜಂತರ್‌ ಮಂತರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ದ್ವೇಷ ಭಾಷಣ‘ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಕಾರ್ಯಕ್ರಮದ ಆಯೋಜಕರೊಬ್ಬರಲ್ಲಾದ ಪ್ರೀತ್‌ ಸಿಂಗ್ ಅವರಿಗೆ ದೆಹಲಿ ಹೈಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮುಕ್ತಾ ಗುಪ್ತಾ ಅವರು, ‘ಅರ್ಜಿದಾರರಿಗೆ ಜಾಮೀನು ನೀಡಲಾಗಿದೆ‘ ಎಂದು ಹೇಳಿದರು.

ಆಗಸ್ಟ್‌ 8ರಂದು ಜಂತರ್‌ ಮಂತರ್‌ನಲ್ಲಿ ಆಯೋಜಿಸಿದ್ದ ರ‍್ಯಾಲಿಯಲ್ಲಿ ನಿರ್ದಿಷ್ಟ ಧರ್ಮದ ವಿರುದ್ಧ ಪ್ರಚಾರ ಮಾಡಲು ಯುವಕರನ್ನು ಪ್ರಚೋದಿಸಿದ ಮತ್ತು ವಿವಿಧ ಗುಂಪುಗಳ ನಡುವೆ ದೇಷ ಬಿತ್ತುವ ಘೋಷಣೆ ಕೂಗಿದ ಆರೋಪದ ಮೇಲೆ ಪೀತ್‌ ಸಿಂಗ್‌ ಅವರನ್ನು ಬಂಧಿಸಲಾಗಿತ್ತು. ನಂತರ ಆಗಸ್ಟ್‌ 10ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಪ್ರೀತ್‌ ಸಿಂಗ್ ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯಲ್ಲಿ, ‘ಸಿಂಗ್ ಅವರು ಯಾವುದೇ ವ್ಯಕ್ತಿ ಅಥವಾ ಸಮುದಾಯದ ವಿರುದ್ಧ ಪ್ರಚೋದನಕಾರಿ ಭಾಷಣ ಅಥವಾ ಯಾವುದೇ ದ್ವೇಷ ಬಿತ್ತುವ ಘೋಷಣೆಯನ್ನು ಕೂಗುವುದರಲ್ಲಿ ಭಾಗಿಯಾಗಿಲ್ಲ‘ ಎಂದು ಹೇಳಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು