ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವೇಷ ಭಾಷಣ ಪ್ರಕರಣ: ಆರೋಪಿ ಪ್ರೀತ್‌ ಸಿಂಗ್‌ ಜಾಮೀನು ಅರ್ಜಿ ವಜಾ

Last Updated 28 ಆಗಸ್ಟ್ 2021, 9:39 IST
ಅಕ್ಷರ ಗಾತ್ರ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಕೋಮು ಭಾವನೆಯನ್ನು ಪ್ರಚೋದಿಸುವ ಘೋಷಣೆಗಳನ್ನು ಕೂಗಿದ ಆರೋಪದಡಿ ಬಂಧನಕ್ಕೊಳಗಾಗಿರುವ ಕಾರ್ಯಕ್ರಮದ ಆಯೋಜಕ ಪ್ರೀತ್‌ ಸಿಂಗ್‌ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯವು ವಜಾಗೊಳಿಸಿದೆ.

ಈ ತಿಂಗಳ 8ರಂದು ಜಂತರ್‌ ಮಂತರ್‌ನಲ್ಲಿ ಆಯೋಜಿಸಲಾಗಿದ್ದ ರ‍್ಯಾಲಿಯಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷ ಸೃಷ್ಟಿಸುವಂತಹ ಘೋಷಣೆಗಳನ್ನು ಕೂಗಿದರು ಮತ್ತು ಯುವಕರನ್ನು ನಿರ್ಧಿಷ್ಟ ಧರ್ಮದ ವಿರುದ್ಧ ಪ್ರಚೋದಿಸಿದರು ಎಂಬ ಆರೋಪದಡಿ ದೆಹಲಿ ಪೊಲೀಸರು ಪ್ರೀತ್‌ ಸಿಂಗ್‌ ಅವರನ್ನು ಬಂಧಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್‌ ನ್ಯಾಯಧೀಶ ಅನಿಲ್ ಅಂತಿಲ್‌ ಅವರು, ಪ್ರಾಸಿಕ್ಯೂಷನ್‌ ಸಲ್ಲಿಸಿದ ದಾಖಲೆಗಳ ಆಧಾರದ ಮೇಲೆ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ರ‍್ಯಾಲಿಯ ಪ್ರಮುಖ ಆಯೋಜಕರಾಗಿರುವ ಪ್ರೀತ್‌ ಸಿಂಗ್‌, ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗಿಯಾಗಿರುವುದು ತಿಳಿದುಬಂದಿದೆ ಎಂದಿದ್ಧಾರೆ.

‘ದೆಹಲಿ ಪೊಲೀಸರು ಜಂತರ್‌ ಮಂತರ್‌ನಲ್ಲಿ ರ‍್ಯಾಲಿ ನಡೆಸಲು ಅನುಮತಿ ತಿರಸ್ಕರಿಸಿದ್ದರು, ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇದು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೋವಿಡ್‌ ಮಾರ್ಗಸೂಚಿಯ ಉಲ್ಲಂಘನೆಯಾಗಿದೆ’ ಎಂದು ಶುಕ್ರವಾರ ಹೊರಡಿಸಿದ ಆದೇಶದಲ್ಲಿ ನ್ಯಾಯಾಲಯವು ಹೇಳಿದೆ.

ಈ ಪ್ರಕರಣದ ಇತರ ಆರೋಪಿಗಳಾದ ಹಿಂದೂ ರಕ್ಷಾ ದಳದ ಅಧ್ಯಕ್ಷರು ಮತ್ತು ಪಿಂಕಿ ಚೌಧರಿ ಅವರುನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ ಅರ್ಜಿಗಳನ್ನು ನ್ಯಾಯಾಲಯ ತಿರಸ್ಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT