ಶುಕ್ರವಾರ, ಜುಲೈ 1, 2022
28 °C
ದ್ವೇಷ ಭಾಷಣ ಸಮರ್ಥಿಸಿಕೊಂಡಿದ್ದಕ್ಕೆ ನ್ಯಾಯಾಲಯದ ಕ್ರಮ

ದ್ವೇಷ ಭಾಷಣ: ಪಿ.ಸಿ.ಜಾರ್ಜ್‌ಗೆ ನೀಡಿದ್ದ ಜಾಮೀನು ರದ್ದು

ಪಿಟಿಐ Updated:

ಅಕ್ಷರ ಗಾತ್ರ : | |

ತಿರುವನಂತಪುರ: ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಹಿರಿಯ ರಾಜಕಾರಣಿ ಪಿ.ಸಿ.ಜಾರ್ಜ್‌ ಅವರಿಗೆ ನೀಡಲಾಗಿದ್ದ ಜಾಮೀನನ್ನು ಕೇರಳದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಬುಧವಾರ ರದ್ದುಗೊಳಿಸಿದೆ.

ಜಾಮೀನು ನೀಡುವ ವೇಳೆ ವಿಧಿಸಿದ ನಿಯಮ ಉಲ್ಲಂಘಿಸಿ, ಜಾರ್ಜ್‌ ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಮತ್ತು ಕೋಮು ದ್ವೇಷ ಹರಡುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಮೂಲಕ ಜಾಮೀನು ನೀಡುವಾಗ ವಿಧಿಸಲಾಗಿದ್ದ ನಿಯಮಗಳನ್ನು ಉಲ್ಲಂಘಿಸಿದ್ದು, ಅವರ ಜಾಮೀನು ರದ್ದುಗೊಳಿಸಬೇಕು ಎಂಬ ಪೊಲೀಸರ ಕೋರಿಕೆಯನ್ನು ನ್ಯಾಯಾಲಯ ಪುರಸ್ಕರಿಸಿದೆ. 

‘ಜಾಮೀನು ನೀಡುವಾಗ ಆರೋಪಿಯು ಮತ್ತೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ವಿವಾದಾತ್ಮಕ ಹೇಳಿಕೆಗಳನ್ನು ನೀಡಬಾರದು ಮತ್ತು ಅಂಥ ಹೇಳಿಕೆಗಳನ್ನು ಪ್ರಚಾರ ಮಾಡಬಾರದು ಎಂದು ನ್ಯಾಯಾಲಯ ಸೂಚಿಸಿದೆ. ಆದಾಗ್ಯೂ, ಜಾರ್ಜ್ ಅವರು ವಂಚಿಯೂರ್‌ನಲ್ಲಿ ನ್ಯಾಯಾಲಯ ಅಧಿಕಾರಿ ನಿವಾಸದ ಬಳಿಯೇ ತಮ್ಮ ಭಾಷಣದ ಹೇಳಿಕೆಗಳಿಗೆ ಈಗಲೂ ಬದ್ಧನಾಗಿದ್ದೇನೆ ಎಂದು ಟಿವಿ ಮಾಧ್ಯಮಗಳಿಗೆ ಹೇಳಿದ್ದಾರೆ. ಈ ಮೂಲಕ ಅವರು ಮತ್ತೆ ಕೋಮು ದ್ವೇಷ ಹರಡಿದ್ದಾರೆ’ ಎಂದು ಪೊಲೀಸರು ಆರೋಪಿಸಿದರು.  

ಏಪ್ರಿಲ್‌  29ರಂದು ನಡೆದ ಆನಂತಪುರಿ ಹಿಂದೂ ಮಹಾ ಸಮ್ಮೇಳನದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಜಾರ್ಜ್‌ ಅವರನ್ನು ಮೇ 1ರಂದು ಬಂಧಿಸಲಾಗಿತ್ತು. 

70 ವರ್ಷದ ಹಿರಿಯ ರಾಜಕಾರಣಿಯಾದ ಜಾರ್ಜ್ ಅವರು, ಕೇರಳದಲ್ಲಿರುವ ಮುಸ್ಲಿಂಯೇತರರು ಮುಸ್ಲಿಂ ಸಮುದಾಯ ನಡೆಸುವ ರೆಸ್ಟೋರೆಂಟ್‌ಗಳಲ್ಲಿ ಊಟ ಮಾಡಬೇಡಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆ ಬಳಿಕ ಮೇ 10ರಂದು ಅವರ ವಿರುದ್ಧ ಮತ್ತೊಂದು ದ್ವೇಷ ಭಾಷಣದ ಪ್ರಕರಣ ದಾಖಲಿಸಲಾಗಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು