ಮಂಗಳವಾರ, ಅಕ್ಟೋಬರ್ 20, 2020
23 °C

ಹಾಥರಸ್ ಜಿಲ್ಲಾಧಿಕಾರಿ ಅಮಾನತಿಗೆ ಪ್ರಿಯಾಂಕಾ ವಾದ್ರಾ ಒತ್ತಾಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಹಾಥರಸ್‌ನ ಅತ್ಯಾಚಾರಕ್ಕೊಳಗಾದ ದಲಿತ ಮಹಿಳೆಯ ಕುಟುಂಬದವರೊಂದಿಗೆ ಕೆಟ್ಟದಾಗಿ ನಡೆದುಕೊಂಡಿರುವ ಅಲ್ಲಿನ ಜಿಲ್ಲಾಧಿಕಾರಿಯನ್ನು ಕೂಡಲೇ ಅಮಾನತುಗೊಳಿಸಿ, ಇಡೀ ಪ್ರಕರಣದಲ್ಲಿ ಅವರ ಪಾತ್ರವಿರುವ ಕುರಿತು ತನಿಖೆ ನಡೆಸಬೇಕು  ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಒತ್ತಾಯಿಸಿದ್ದಾರೆ.

‘ಹಾಥರಸ್‌ ಜಿಲ್ಲಾಧಿಕಾರಿ ಸಂತ್ರಸ್ಥೆಯ ಕುಟುಂಬದವರೊಂದಿಗೆ ಬಹಳ ಕೆಟ್ಟದಾಗಿ ನಡೆದುಕೊಂಡಿರುವುದಾಗಿ ಸಂತ್ರಸ್ಥೆಯ ಕುಟುಂಬದವರು ಹೇಳಿದ್ದಾರೆ. ಇಂಥ ಅಧಿಕಾರಿಯನ್ನು ಯಾರು ರಕ್ಷಿಸುತ್ತಿದ್ದಾರೆ‘ ಎಂದು ಪ್ರಿಯಾಂಕಾ ಪ್ರಶ್ನಿಸಿದ್ದಾರೆ.

ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ಅವರು, ‘ಅನ್ಯಾಯಕ್ಕೊಳಗಾದ ಕುಟುಂಬದವರು ಪ್ರಕರಣವನ್ನು ನ್ಯಾಯಾಂಗ ತನಿಖೆ ಒಪ್ಪಿಸಿ ಎಂದು ಒತ್ತಾಯಿಸುತ್ತಿರುವಾಗ, ಸರ್ಕಾರ ಈ ಪ್ರಕರಣವನ್ನು ಸಿಬಿಐ ಮತ್ತು ಎಸ್‌ಐಟಿ ತನಿಖೆಗೆ ವಹಿಸಿರುವ ಹಿಂದಿನ ಕಾರಣ ಏನು?‘ ಎಂದು ಅವರು ಪ್ರಶ್ನಿಸಿದ್ದಾರೆ. 

‘ಉತ್ತರ ಪ್ರದೇಶ ಸರ್ಕಾರ ಸ್ವಲ್ಪ ನಿದ್ದೆಯಿಂದ ಎಚ್ಚರಗೊಂಡು, ಸಂತ್ರಸ್ತೆಯ ಕುಟುಂಬದವರ ಸ್ಥಾನದಲ್ಲಿ ನಿಂತು ಯೋಚಿಸಬೇಕು‘ ಎಂದು ಒತ್ತಾಯಿಸಿದ್ದಾರೆ.‌  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು