ಶುಕ್ರವಾರ, ನವೆಂಬರ್ 27, 2020
17 °C

ಕೋರ್ಟ್ ಮೇಲುಸ್ತುವಾರಿಯಲ್ಲಿ ಹಾಥರಸ್ ಪ್ರಕರಣದ ತನಿಖೆ: ನಾಳೆ ‘ಸುಪ್ರೀಂ‌‘ ತೀರ್ಪು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಹಾಥರಸ್‌ನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯು ಕೋರ್ಟ್‌ ಮೇಲುಸ್ತುವಾರಿಯಲ್ಲಿಯೇ  ನಡೆಯಬೇಕು ಎಂದು ಕೋರಿ ಸಲ್ಲಿಸಲಾಗಿರುವ ವಿವಿಧ ಅರ್ಜಿಗಳಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಲಿದೆ.

ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬಡೆ ನೇತೃತ್ವದ ಮೂವರು ಸದಸ್ಯರ ಪೀಠವು ಈ ಕುರಿತ ತೀರ್ಪನ್ನು ಅಕ್ಟೋಬರ್ 15ರಂದು ಕಾಯ್ದಿರಿಸಿತ್ತು. ಉತ್ತರ ಪ್ರದೇಶದಲ್ಲಿ ನ್ಯಾಯಸಮ್ಮತವಾದ ತನಿಖೆ, ವಿಚಾರಣೆ ಸಾಧ್ಯವಿಲ್ಲ ಎಂದು ಅರ್ಜಿಗಳಲ್ಲಿ ಸಾಮಾಜಿಕ ಕಾರ್ಯಕರ್ತರು, ವಕೀಲರು ವಾದ ಮಂಡಿಸಿದ್ದರು.

ಕಾರ್ಯಕರ್ತೆ, ವಕೀಲರಾದ ಇಂದಿರಾ ಜೈಸಿಂಗ್ ಕೂಡಾ ಇಂಥದೇ ಆತಂಕವನ್ನು ವ್ಯಕ್ತಪಡಿಸಿದ್ದರು. ತನಿಖೆ ಪೂರ್ಣಗೊಂಡ ನಂತರದ ಪ್ರಕರಣದ ವಿಚಾರಣೆಯನ್ನು ನವದೆಹಲಿಗೆ ವರ್ಗಾಹಿಸಬೇಕು ಎಂದು ಸಂತ್ರಸ್ತೆಯ ಕುಟುಂಬದ ಪರವಾಗಿ ಹಾಜರಿದ್ದ ವಕೀಲರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು