ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಥರಸ್: ಅತ್ಯಾಚಾರ ಸಂತ್ರಸ್ತೆ ಕುಟುಂಬದವರ ಭೇಟಿಯಾದ ರಾಹುಲ್, ಪ್ರಿಯಾಂಕಾ ಗಾಂಧಿ

Last Updated 3 ಅಕ್ಟೋಬರ್ 2020, 15:16 IST
ಅಕ್ಷರ ಗಾತ್ರ

ಲಖನೌ: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಇತರ ನಾಯಕರು ಶನಿವಾರ ಸಂಜೆ ಹಾಥರಸ್‌ಗೆ ತೆರಳಿ ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರನ್ನು ಭೇಟಿಯಾದರು.

ಗುರುವಾರವೇ ಸಂತ್ರಸ್ತೆಯ ಕುಟುಂದವರನ್ನು ಭೇಟಿ ಮಾಡಲು ರಾಹುಲ್ ಹಾಗೂ ಪ್ರಿಯಾಂಕಾ ಮುಂದಾಗಿದ್ದರು. ಆದರೆ, ಅವರನ್ನು ಉತ್ತರ ಪ್ರದೇಶ ಪೊಲೀಸರು ಮಾರ್ಗ ಮಧ್ಯದಲ್ಲೇ ತಡೆದಿದ್ದರು. ರಾಹುಲ್, ಪ್ರಿಯಾಂಕಾ ಹಾಗೂ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದರು. ಕೊರೊನಾ ವೈರಸ್ ಸಾಂಕ್ರಾಮಿಕದ ಸಂದರ್ಭ ಸಾರ್ವಜನಿಕರ ಓಡಾಟಕ್ಕಿರುವ ನಿರ್ಬಂಧ ಉಲ್ಲಂಘಿಸಿದ್ದಕ್ಕಾಗಿ ಅವರನ್ನು ವಶಕ್ಕೆ ಪಡೆಯಲಾಗಿತ್ತು.

ಪತ್ರಕರ್ತರು, ರಾಜಕಾರಣಿಗಳು ಹಾಥರಸ್ ಪ್ರವೇಶಿಸದಂತೆ ಶುಕ್ರವಾರ ಅಲ್ಲಿನ ಆಡಳಿತ ನಿರ್ಬಂಧ ಹೇರಿತ್ತು. ಶನಿವಾರ ಬೆಳಿಗ್ಗೆಯಿಂದ ಮಾಧ್ಯಮದವರಿಗೆ ಅವಕಾಶ ನೀಡಲಾಗಿದೆ. ಮಧ್ಯಾಹ್ನದ ವೇಳೆಗೆ, ರಾಹುಲ್ ಗಾಂಧಿ ಮತ್ತು ಪಕ್ಷದ ಇತರ ನಾಲ್ವರು ನಾಯಕರಿಗೆ ಹಾಥರಸ್ ಭೇಟಿಗೆ ಅವಕಾಶ ನೀಡಲಾಗಿದೆ ಎಂದು ನೊಯ್ಡಾ ಪೊಲೀಸರು ತಿಳಿಸಿದ್ದರು.

ಹಾಥರಸ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯು ಸೆಪ್ಟೆಂಬರ್ 29ರಂದು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT