ಶುಕ್ರವಾರ, ಅಕ್ಟೋಬರ್ 23, 2020
22 °C

ಕೋರ್ಟ್‌ಗೆ ಹಾಜರಾದ ಹಾಥರಸ್‌ ಸಂತ್ರಸ್ತೆ ಕುಟುಂಬ

ಪಿಟಿಐ Updated:

ಅಕ್ಷರ ಗಾತ್ರ : | |

ಲಖನೌ: ಹಾಥರಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ‌ ಸಂತ್ರಸ್ತೆಯ ಕುಟುಂಬದ ಸದಸ್ಯರು ಸೋಮವಾರ ಬಿಗಿ ಭದ್ರತೆಯ ನಡುವೆ ಇಲ್ಲಿನ ಅಲಹಾಬಾದ್‌ ಹೈಕೋರ್ಟ್‌ನ ಲಖನೌ ಪೀಠದ ಎದುರು ಹಾಜರಾದರು. 

ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ರಾಜನ್ ರಾಯ್ ಅವರಿದ್ದ ಪೀಠ ಪ್ರಕರಣದ ವಿಚಾರಣೆ ನಡೆಸಿತು. ಮುಂದಿನ ವಿಚಾರಣೆಯನ್ನು ನವೆಂಬರ್‌ 2ಕ್ಕೆ ನಿಗದಿಪಡಿಸಲಾಗಿದೆ.

ಹಾಥರಸ್‌ ಜಿಲ್ಲಾಧಿಕಾರಿ ಮತ್ತು ಎಸ್ಪಿ ಜೊತೆಗೆ ‌ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡಿಜಿಪಿ ಮತ್ತು ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಅವರು ನ್ಯಾಯಾಲಯದ ಮುಂದೆ ಹಾಜರಾದರು. 

ಕಾನೂನು ಮತ್ತು ಸುವ್ಯವಸ್ಥೆಯನ್ನು ಪರಿಗಣಿಸಿ ರಾತ್ರಿಯೇ ಶವ ಸಂಸ್ಕಾರ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಧಿಕಾರಿಗಳಿಂದ ಯಾವುದೇ ಒತ್ತಡ ಇರಲಿಲ್ಲ ಎಂದು ಜಿಲ್ಲಾಧಿಕಾರಿ ನ್ಯಾಯಾಲಯಕ್ಕೆ ತಿಳಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು