ಸೋಮವಾರ, ಮೇ 23, 2022
24 °C

11 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಇಬ್ಬರು ಅಪರಾಧಿಗಳಿಗೆ 21 ವರ್ಷ ಜೈಲು ಶಿಕ್ಷೆ

ಪಿಟಿಐ Updated:

ಅಕ್ಷರ ಗಾತ್ರ : | |

ನೋಯ್ಡಾ: ಉತ್ತರ ಪ್ರದೇಶದ ಹಾಥರಸ್‌ನಲ್ಲಿ ನಡೆದಿದ್ದ 11 ವರ್ಷದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಅಪರಾಧಿಗಳಿಗೆ 21 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಪೊಲೀಸ್ ಇಲಾಖೆಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಘಟನೆ ನಡೆದಾಗ 18 ಮತ್ತು 19 ವರ್ಷ ವಯಸ್ಸಿನವರಾಗಿದ್ದ ಅಪರಾಧಿಗಳಿಗೆ ನ್ಯಾಯಾಲಯ ತಲಾ ₹ 51,000 ದಂಡ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಾಥರಸ್‌ನ ಕೋತ್ವಾಲಿ ಪೊಲೀಸ್ ಠಾಣೆಯಲ್ಲಿ 2019ರ ಫೆಬ್ರುವರಿ 12ರಂದು ಬಾಲಕಿಯ ತಾಯಿ ದೂರು ದಾಖಲಿಸಿದ್ದರು. ಬಾಲಕಿ ವಾಸಿಸುತ್ತಿದ್ದ ಕಟ್ಟಡದಲ್ಲಿಯೇ ಇದ್ದ ಆರೋಪಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವುದಾಗಿ ದೂರಿನಲ್ಲಿ ತಿಳಿಸಿದ್ದರು. ಬಳಿಕ ಎಫ್ಐಆರ್ ದಾಖಲಿಸಿದ್ದ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು ಎಂದು ಹಾಥರಸ್‌ ಪೊಲೀಸ್ ಠಾಣೆಯ ವಕ್ತಾರ ಮಾಹಿತಿ ನೀಡಿದ್ದಾರೆ.

ಹೊಟ್ಟೆ ನೋಯುತ್ತಿರುವುದಾಗಿ ಬಾಲಕಿ ತಾಯಿಯ ಬಳಿ ತಿಳಿಸಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಆಕೆ ಗರ್ಭಿಣಿಯಾಗಿರುವುದು ಪತ್ತೆಯಾಗಿದೆ. ಈ ಬಗ್ಗೆ ಬಾಲಕಿಯನ್ನು ವಿಚಾರಿಸಿದಾಗ, ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಇಬ್ಬರು ಆರೋಪಿಗಳು ಬಾಲಕಿಯನ್ನು ಟೆರೇಸ್ ಮೇಲೆ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ ತಿಳಿಸಿದ್ದಾಳೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಅಪರಾಧಿಗಳಿಗೆ ಶಿಕ್ಷೆ ವಿಧಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು