ಶನಿವಾರ, ಮೇ 28, 2022
30 °C

ದಲಿತರೊಂದಿಗೆ ಚಹಾ ಸೇವಿಸಿ, ಬಿಜೆಪಿಗೆ ಮತ ಹಾಕುವಂತೆ ಮನವೊಲಿಸಿ: ಸ್ವತಂತ್ರ ದೇವ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಲಖನೌ: ಪಕ್ಷದ ಕಾರ್ಯಕರ್ತರು ದಲಿತರೊಂದಿಗೆ ಚಹಾ ಸೇವಿಸಿ, ಅವರು ಬಿಜೆಪಿಗೆ ಮತ ನೀಡುವಂತೆ ಮನವೊಲಿಸಬೇಕು ಎಂದು ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಕರೆ ನೀಡಿದ್ದಾರೆ.

403 ಸದಸ್ಯ ಬಲದ ಉತ್ತರಪ್ರದೇಶ ವಿಧಾನಸಭೆಗೆ 2022ರಲ್ಲಿ ಚುನಾವಣೆ ನಡೆಯಲಿದೆ.

ಭಾನುವಾರ ನಡೆದ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ (ಇತರೆ ಹಿಂದುಳಿದ ವರ್ಗಗಳ ಸಾಮಾಜಿಕ ಪ್ರತಿನಿಧಿ ಸಮ್ಮೇಳನ ಮತ್ತು ವೈಶ್ಯ ವ್ಯಾಪಾರಿ ಸಮ್ಮೇಳನದಲ್ಲಿ) ಭಾಗವಹಿಸಿದ ಸಿಂಗ್, ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ಕರೆ ನೀಡಿದರು.

‘ನೂರು ದಲಿತರೊಂದಿಗೆ ಚಹಾ ಸೇವಿಸಿ. ಮತ ಚಲಾಯಿಸಬೇಕಿರುವುದು ರಾಷ್ಟ್ರೀಯತೆಯ ಆಧಾರದಲ್ಲಿ. ಜಾತಿ, ಹಣ ಅಥವಾ ಧರ್ಮದ ಆಧಾರದಲ್ಲಿ ಅಲ್ಲ ಎಂಬುದನ್ನು ಅವರಿಗೆ ಮನವರಿಕೆ ಮಾಡಬೇಕು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸುವಂತೆ ಮನವೊಲಿಸಬೇಕು ಎಂದು ಸೂಚಿಸಿದ್ದಾರೆ.

ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಕಾಂಗ್ರೆಸ್ ನಾಯಕಿ ಪ‍್ರಿಯಾಂಕಾ ಗಾಂಧಿ ಟೀಕಿಸಿದ್ದರು. ಅದರ ಬೆನ್ನಲ್ಲೇ ಸಿಂಗ್ ಈ ಹೇಳಿಕೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು