ಅತ್ಯಾಚಾರಕ್ಕೆ ಪ್ರತಿರೋಧ: ಬೆಂಕಿ ಹಚ್ಚಿದ ದುಷ್ಕರ್ಮಿಗಳು, ಸಂತ್ರಸ್ತೆ ಸಾವು

ಹಜಾರಿಬಾಗ್ (ಜಾರ್ಖಂಡ್): ಅತ್ಯಾಚಾರ ಯತ್ನಕ್ಕೆ ವಿರೋಧ ವ್ಯಕ್ತಪಡಿಸಿದ 23 ವರ್ಷದ ಯುವತಿ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ತೀವ್ರ ಗಾಯಗೊಂಡ ಯುವತಿ ರಾಂಚಿ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದರು.
‘ಜ.7ರ ರಾತ್ರಿ ಸಂತ್ರಸ್ತೆಯ ಇಲ್ಲಿನ ನಿವಾಸದಲ್ಲಿಯೇ ಘಟನೆ ನಡೆದಿದ್ದು, ನಾಲ್ವರು ಆರೋಪಿಗಳ ಪೈಕಿ ಮೂವರು ಯುವತಿಯ ಸಂಬಂಧಿಕರು. ಗಾಯಗೊಂಡಿದ್ದ ಯುವತಿಗೆ ರಾಂಚಿಯಲ್ಲಿರುವ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ(ರಿಮ್ಸ್) ಚಿಕಿತ್ಸೆ ನೀಡಲಾಗುತ್ತಿತ್ತು’ ಎಂದು ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರತನ್ ಚೋಥೆ ತಿಳಿಸಿದರು.
‘ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಆದಾಗ್ಯೂ ಈವರೆಗೆ ಯಾರನ್ನೂ ಬಂಧಿಸಿಲ್ಲ. ಪ್ರಕರಣದಲ್ಲಿ ಸಂತ್ರಸ್ತೆಯ ಪತಿಯ ಪಾತ್ರ ಮತ್ತು ಎಫ್‌ಐಆರ್‌ನಲ್ಲಿ ದಾಖಲಾಗಿರುವ ಆರೋಪಿಗಳ ಪಾತ್ರದ ಬಗ್ಗೆ ತನಿಖೆ ನಡೆಸಲಾಗುವುದು’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.