ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂತನ ಐಟಿ ನಿಯಮ ಪ್ರಶ್ನಿಸಿ ಅರ್ಜಿ: ಪ್ರತಿಕ್ರಿಯಿಸುವಂತೆ ಕೇಂದ್ರಕ್ಕೆ ಸೂಚನೆ

Last Updated 27 ಆಗಸ್ಟ್ 2021, 10:29 IST
ಅಕ್ಷರ ಗಾತ್ರ

ನವದೆಹಲಿ: ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್‌ಬುಕ್‌ ಮತ್ತು ವಾಟ್ಸ್‌ಆ್ಯಪ್‌ ಸಲ್ಲಿಸಿರುವ ಅರ್ಜಿಗಳಿಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್‌ ಶುಕ್ರವಾರ ಸೂಚಿಸಿದೆ.

‘ಮಾಹಿತಿ ತಂತ್ರಜ್ಞಾನದ ಕಾಯ್ದೆಯ ಹೊಸ ನಿಯಮಗಳು ಖಾಸಗಿತನದ ಹಕ್ಕನ್ನು ಉಲ್ಲಂಘಿಸುತ್ತದೆ ಮತ್ತು ಈ ನಿಯಮಗಳು ಅಸಂವಿಧಾನಿಕವಾಗಿದೆ’ ಎಂದು ಅರ್ಜಿ ಹೇಳಿದೆ.

ಈ ಬಗ್ಗೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎನ್‌.ಪಟೇಲ್‌ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್‌ ಅವರ ಪೀಠವು, ನೂತನ ಐಟಿ ನಿಯಮವನ್ನು ಪ್ರಶ್ನಿಸಿ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌ ಸಲ್ಲಿಸಿರುವ ಅರ್ಜಿಯ ಕುರಿತಾಗಿ, ಮಾಹಿತಿ ತಂತ್ರಜ್ಞಾನ ಸಚಿವಾಲಯದ ಮೂಲಕ ತನ್ನ ನಿಲುವನ್ನು ವ್ಯಕ್ತಪಡಿಸುವಂತೆ ಕೇಂದ್ರಕ್ಕೆ ಸೂಚಿಸಿದೆ.

ಜತೆಗೆ, ಈ ನಿಯಮಗಳನ್ನು ಜಾರಿಗೆ ತರದಂತೆ ತಡೆಯಾಜ್ಞೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೂ ಪ್ರತಿಕ್ರಿಯಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿರುವ ಪೀಠ, ಈ ಸಂಬಂಧ ಮುಂದಿನ ವಿಚಾರಣೆಯನ್ನು ಅಕ್ಟೋಬರ್‌ 22 ರಂದು ನಡೆಸುವುದಾಗಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT