ಶನಿವಾರ, ಜುಲೈ 24, 2021
20 °C

ಶಿವಸೇನಾ ಸಂಸದರ ವಿರುದ್ಧ ಮಹಿಳೆ ಆರೋಪ: ತನಿಖೆಗೆ ಬಾಂಬೆ ಹೈಕೋರ್ಟ್‌ ನಿರ್ದೇಶನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಶಿವಸೇನಾ ಸಂಸದ ಸಂಜಯ್ ರಾವುತ್ ಮತ್ತು ತನ್ನಿಂದ ಬೇರೆಯಾಗಿರುವ ಪತಿಯ ಸೂಚನೆ ಮೇರೆಗೆ ಕೆಲವು ವ್ಯಕ್ತಿಗಳು ತನ್ನನ್ನು ಹಿಂಬಾಲಿಸುತ್ತಾ, ಕಿರುಕುಳ ನೀಡುತ್ತಿದ್ದಾರೆ ಎಂದು 36 ವರ್ಷದ ಮಹಿಳೆಯೊಬ್ಬರು ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್‌ ಮಂಗಳವಾರ ಮುಂಬೈ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಎಸ್.ಎಸ್.ಶಿಂಧೆ ಮತ್ತು ಎನ್.ಜೆ.ಜಮಾದರ್ ಅವರ ವಿಭಾಗೀಯ ಪೀಠ, ಮಹಿಳೆಯ ಆರೋಪ ಕುರಿತು ತನಿಖೆ ನಡೆಸಿ, ಜೂನ್ 24 ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿತು.

ವೃತ್ತಿಯಲ್ಲಿ ಮನೋರೋಗ ತಜ್ಞೆಯಾಗಿರುವ ಈಕೆ ಕಳೆದ ಫೆಬ್ರುವರಿಯಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ, ‘ಶಿವಸೇನಾ ಸಂಸದ ಸಂಜಯ್ ರಾವುತ್ ಮತ್ತು ತನ್ನ ವಿಚ್ಛೇದಿತ ಪತಿಯ ಸೂಚನೆ ಮೇರೆಗೆ ಕೆಲವು ಅಪರಿಚಿತ ವ್ಯಕ್ತಿಗಳು ತನ್ನನ್ನು ಹಿಂಬಾಲಿಸುತ್ತಾ ಕಿರುಕುಳ ನೀಡುತ್ತಿದ್ದಾರೆ‘ ಎಂದ ಆರೋಪಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು