ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿನ್ ವಾಜೆ ಗೃಹಬಂಧನ ಅರ್ಜಿ ಕುರಿತು ಅಫಿಡವಿಟ್ ಸಲ್ಲಿಸಲು ಎನ್ಐಎಗೆ ಸೂಚನೆ

Last Updated 6 ಅಕ್ಟೋಬರ್ 2021, 12:00 IST
ಅಕ್ಷರ ಗಾತ್ರ

ಮುಂಬೈ: ಉದ್ಯಮಿ ಮುಕೇಶ್‌ ಅಂಬಾನಿ ನಿವಾಸದ ಬಳಿ ಸ್ಫೋಟಕಗಳು ತುಂಬಿದ್ದ ವಾಹನ ನಿಲ್ಲಿಸಿದ ಪ್ರಕರಣ ಹಾಗೂ ಉದ್ಯಮಿ ಮನಸುಖ್‌ ಹಿರೇನ್‌ ಹತ್ಯೆ ಪ್ರಕರಣದಲ್ಲಿ ಬಂಧಿತವಾಗಿರುವ ಸಚಿನ್ ವಾಜೆ ಅವರ ಗೃಹಬಂಧನದ ಅರ್ಜಿಗೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸುವಂತೆ ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ಬಾಂಬೆ ಹೈಕೋರ್ಟ್ ಬುಧವಾರ ನಿರ್ದೇಶನ ನೀಡಿದೆ.

ಕಳೆದ ತಿಂಗಳು ಹೃದಯ ಬೈಪಾಸ್ ಶಸ್ತ್ರಚಿಕಿತ್ಸೆಗೊಳಗಾಗಿದ್ದ ವಾಜೆಯನ್ನು ಖಾಸಗಿ ಆಸ್ಪತ್ರೆಯಲ್ಲಿರಿಸಲು ಕೋರಿ ಎನ್ಐಎ ಸಲ್ಲಿಸಿದ್ದ ಮನವಿಗೆ ನ್ಯಾಯಾಲಯ ಸ್ಪಂದಿಸಿತ್ತು. ನಂತರ ಜೈಲಿನಲ್ಲಿದ್ದರೆ ಸೋಂಕಿಗೀಡಾಗುವ ಸಾಧ್ಯತೆ ಇರುವುದರಿಂದ ತಮ್ಮನ್ನು ಗೃಹಬಂಧನದಲ್ಲಿರಿಸುವಂತೆ ಕೋರಿ ವಾಜೆ ಅವರು ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಆದರೆ, ಈ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಕಳೆದ ವಾರ ಈ ಸಂಬಂಧ ವಾಜೆ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿಗಳಾದ ನಿತಿನ್ ಜಮ್ದಾರ್ ಮತ್ತು ಸಾರಂಗ್ ಕೊತ್ವಾಲ್ ನೇತೃತ್ವದ ವಿಭಾಗೀಯ ಪೀಠವು ಗೃಹಬಂಧನಕ್ಕೆ ಸಂಬಂಧಿಸಿದಂತೆ ಒಂದು ವಾರದೊಳಗೆ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸುವಂತೆ ಎನ್ಐಎಗೆ ನಿರ್ದೇಶನ ನೀಡಿದೆ.

ವಾಜೆ ಪರ ವಕೀಲರಾದ ಸುದೀಪ್ ಪಾಸ್ಬೋಲಾ ಮತ್ತು ರೌನಕ್ ನಾಯಕ್ ಅವರು, ವಾಜೆಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿದ್ದು, ನವಿ ಮುಂಬೈನ ತಾಲೋಜಾ ಜೈಲಿನಲ್ಲಿರಿಸಲಾಗಿದೆ. ಜೈಲಿನ ಆಸ್ಪತ್ರೆಯು ಕಳಪೆ ಸ್ಥಿತಿಯಲ್ಲಿದ್ದು, ಸುಸಜ್ಜಿತವಾಗಿಲ್ಲ. ಅಲ್ಲಿ ವಾಜೆ ಅವರಿಗೆ ಸೋಂಕು ತಗಲುವ ಅಪಾಯವಿದೆ ಎಂದು ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT