ಶುಕ್ರವಾರ, ಜುಲೈ 30, 2021
23 °C

ಚುನಾವಣೋತ್ತರ ಹಿಂಸಾಚಾರ: ಪಶ್ಚಿಮ ಬಂಗಾಳ ಸರ್ಕಾರದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತಾ: ಚುನಾವಣೋತ್ತರ ಹಿಂಸಾಚಾರದಲ್ಲಿ ನಡೆದಿರುವ ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳ ‌ತನಿಖೆ ನಡೆಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್ಆರ್‌ಸಿ) ನೀಡಿದ್ದ ನಿರ್ದೇಶನವನ್ನು ಹಿಂಪಡೆಯುವಂತೆ ಕೋರಿ ಸಲ್ಲಿಸಿದ್ದ ಪಶ್ಚಿಮ ಬಂಗಾಳ ಸರ್ಕಾರದ ಮನವಿಯನ್ನು ಕೋಲ್ಕತ್ತಾ ಹೈ ಕೋರ್ಟ್‌ ಸೋಮವಾರ ತಿರಸ್ಕರಿಸಿದೆ

ಹೈಕೋರ್ಟ್‌ನ ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಪೀಠವು ಪಶ್ಚಿಮ ಬಂಗಾಳ ಸರ್ಕಾರದ ಮನವಿಯನ್ನು ತಿರಸ್ಕರಿಸಿದೆ.

ಚುನಾವಣೋತ್ತರ ಹಿಂಸಾಚಾರದಲ್ಲಿ ಅನೇಕರು ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಕೆಲವರು ದೈಹಿಕ ಹಲ್ಲೆಗೆ ಒಳಗಾಗಿದ್ದಾರೆ. ಅಂಗಡಿ–ಮಳಿಗೆಗಳನ್ನು ಲೂಟಿ ಮಾಡಲಾಗಿದೆ ಎಂದು ಆರೋಪಿಸಿ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿದ್ದವು.

ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಲಯಕ್ಕೆ ವರದಿಯೊಂದನ್ನು ಸಲ್ಲಿಸಿದ್ದರು.

ಆ ವರದಿ ಪ್ರಕಾರ ಚುನಾವಣೋತ್ತ ಹಿಂಸಾಚಾರದಲ್ಲಿ 3,243 ಜನರಿಗೆ ತೊಂದರೆಯಾಗಿದೆ ಎಂದು ಉಲ್ಲೇಖಿಸಲಾಗಿತ್ತು. ವರದಿಯನ್ನು ಪರಿಗಣಿಸಿದ ನ್ಯಾಯಾಲಯ ಜೂನ್ 18ರಂದು ಆದೇಶ ನೀಡಿತ್ತು.

ಈ ಆದೇಶದಲ್ಲಿ, ಚುನಾವಣೋತ್ತರ ಹಿಂಸಾಚಾರದಲ್ಲಿ ನಡೆದ ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸುವಂತೆ ಎನ್‌ಎಚ್‌ಆರ್‌ಸಿ ಅಧ್ಯಕ್ಷರಿಗೆ ನಿರ್ದೇಶನ ನೀಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು