ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲುಕ್‌ಔಟ್‌ ನೋಟಿಸ್‌ ರದ್ದು ಕೋರಿ ವಜ್ರ ವ್ಯಾಪಾರಿ ಸಲ್ಲಿಸಿದ್ದ ಅರ್ಜಿ ವಜಾ

Last Updated 8 ಜುಲೈ 2022, 15:25 IST
ಅಕ್ಷರ ಗಾತ್ರ

ಮುಂಬೈ: ತಮ್ಮ ವಿರುದ್ಧ ಕೇಂದ್ರ ಸರ್ಕಾರದ ಗಂಭೀರ ವಂಚನೆ ಪ್ರಕರಣಗಳ ತನಿಖಾ ಕಚೇರಿ (ಎಸ್‌ಎಫ್‌ಐಒ)ಲುಕ್‌ಔಟ್‌ ನೋಟಿಸ್‌ (ಎಲ್‌ಒಸಿ) ಹೊರಡಿಸಿರುವುದನ್ನು ಪ್ರಶ್ನಿಸಿ ವಜ್ರ ವ್ಯಾಪಾರಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ವಜಾಗೊಳಿಸಿದೆ.

ವಜ್ರ ವ್ಯಾಪಾರಿ ರಮೇಶ್ ಶಾ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಪಿ.ಬಿ.ವರಾಲೆ ಹಾಗೂ ಎಸ್‌.ಎಂ.ಮೋದಕ್ ಅವರಿದ್ದ ನ್ಯಾಯಪೀಠ ನಡೆಸಿತು.

ತನ್ನ ಪ್ರಯಾಣದ ಮೇಲೆ ಹೇರಿರುವ ನಿರ್ಬಂಧಗಳನ್ನು ಹಿಂಪಡೆಯುವಂತೆ ಎಸ್‌ಎಫ್‌ಐಒಗೆ ನಿರ್ದೇಶನ ನೀಡಬೇಕು ಎಂಬ ರಮೇಶ್ ಶಾ ಅವರ ಮನವಿಯನ್ನು ಸಹ ನ್ಯಾಯಪೀಠ ತಿರಸ್ಕರಿಸಿದೆ.

ವಂಚನೆ ಪ್ರಕರಣದ ಆರೋಪಿಯಾಗಿರುವ ದೇಶ ತೊರೆದಿರುವ ವಜ್ರವ್ಯಾಪಾರಿ ನೀರವ್‌ ಮೋದಿ ಹಾಗೂ ಮೆಹುಲ್‌ ಚೋಕ್ಸಿ ವಿರುದ್ಧ ತನಿಖೆ ನಡೆಯುತ್ತಿದೆ. ಈ ತನಿಖೆಯ ಭಾಗವಾಗಿಶಾವಿರುದ್ಧಎಸ್‌ಎಫ್‌ಐಒ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT