ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬ್ರಿ ಮಸೀದಿ ಧ್ವಂಸ: ಆರೋಪಿಗಳ ಖುಲಾಸೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ
Last Updated 9 ನವೆಂಬರ್ 2022, 13:54 IST
ಅಕ್ಷರ ಗಾತ್ರ

ಲಖನೌ (ಪಿಟಿಐ);ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಸೇರಿದಂತೆ 32 ಆರೋಪಿಗಳನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

ಅಯೋಧ್ಯೆ ನಿವಾಸಿಗಳಾದ ಹಾಜಿ ಮಹಮೂದ್ ಅಹ್ಮದ್ ಮತ್ತು ಸೈಯದ್ ಅಖ್ಲಾಕ್ ಅಹ್ಮದ್ ಸಲ್ಲಿಸಿದ ಮನವಿ ಮೇರೆಗೆ ನ್ಯಾಯಮೂರ್ತಿಗಳಾದ ರಮೇಶ್ ಸಿನ್ಹಾ ಮತ್ತು ಸರೋಜ್ ಯಾದವ್ ಪೀಠ ಈ ಆದೇಶ ನೀಡಿದೆ.

ಉತ್ತರ ಪ್ರದೇಶದ ಅಂದಿನ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಬಿಜೆಪಿ ಹಿರಿಯ ನಾಯಕರಾದ ಎಂ.ಎಂ.ಜೋಶಿ, ಉಮಾ ಭಾರತಿ, ವಿನಯ್ ಕಟಿಯಾರ್ ಮತ್ತು ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಸಾಧ್ವಿ ರಿತಂಭರಾ ಅವರು ಖುಲಾಸೆಗೊಂಡ ಇತರೆ ನಾಯಕರು.

ವಿವಾದಿತ ಕಟ್ಟಡವನ್ನು ಕೆಡವಿದ ಆರೋಪಿಗಳು ಮತ್ತು ಸಂತ್ರಸ್ತರ ವಿರುದ್ಧದ ವಿಚಾರಣೆಯಲ್ಲಿ ತಾವು ಸಾಕ್ಷಿಗಳಾಗಿದ್ದೇವೆ ಎಂದು ಇಬ್ಬರೂ ಅರ್ಜಿಯಲ್ಲಿ ವಾದಿಸಿದ್ದರು.

ಇಬ್ಬರು ಅರ್ಜಿದಾರರು ಈ ಪ್ರಕರಣದಲ್ಲಿ ದೂರುದಾರರು ಅಥವಾ ಸಂತ್ರಸ್ತರಲ್ಲ. ಆದ್ದರಿಂದ ವಿಚಾರಣಾ ನ್ಯಾಯಾಲಯದ ತೀರ್ಪಿನ ವಿರುದ್ಧ ಅಪರಿಚಿತರಂತೆ ಮೇಲ್ಮನವಿ ಸಲ್ಲಿಸಲು ಸಾಧ್ಯವಿಲ್ಲ ಎಂದುರಾಜ್ಯ ಸರ್ಕಾರ ಮತ್ತು ಸಿಬಿಐ ತನ್ನ ಆಕ್ಷೇಪಣೆಯಲ್ಲಿ ಒತ್ತಿ ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT