ಶನಿವಾರ, ಡಿಸೆಂಬರ್ 3, 2022
20 °C

ಸಿಜೆಐ ಚಂದ್ರಚೂಡ ನೇಮಕ ಪ್ರಶ್ನಿಸಿದ್ದ ವ್ಯಕ್ತಿಗೆ ₹1 ಲಕ್ಷ ದಂಡ: ಅರ್ಜಿ ವಜಾ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಅವರನ್ನು ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ)ಯಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ದೆಹಲಿ ಹೈಕೋರ್ಟ್ ಶುಕ್ರವಾರ ₹1 ಲಕ್ಷ ದಂಡದೊಂದಿಗೆ ವಜಾಗೊಳಿಸಿದೆ.

ಇದೊಂದು ‘ಪ್ರಚಾರ ಹಿತಾಸಕ್ತಿಯ ದಾವೆ’ ಎಂದು ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮಣಿಯಮ್‌ ಪ್ರಸಾದ್ ಅವರ ಪೀಠವು ಹೇಳಿತು.

ಯಾವುದೇ ವಸ್ತು, ವಿಷಯವಿಲ್ಲದ ಈ ಅರ್ಜಿಯನ್ನು ಕೇವಲ ಪ್ರಚಾರ ಉದ್ದೇಶದಿಂದ ಸಲ್ಲಿಸಲಾಗಿದೆ ಎಂದು ಪೀಠ ಆಕ್ಷೇಪ ವ್ಯಕ್ತಪಡಿಸಿತು.

ಗ್ರಾಮ ಉದಯ್ ಫೌಂಡೇಶನ್ ಎಂಬ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಎಂದು ಹೇಳಿಕೊಂಡಿರುವ ಅರ್ಜಿದಾರ ಸಂಜೀವ್ ಕುಮಾರ್ ತಿವಾರಿ, ನ್ಯಾಯಮೂರ್ತಿ ಚಂದ್ರಚೂಡ್ ಅವರನ್ನು ಸಿಜೆಐ ಆಗಿ ನೇಮಕ ಮಾಡಿರುವುದನ್ನು ಆಕ್ಷೇಪಿಸಿದ್ದರು. ಈ ನೇಮಕವು ಸಂವಿಧಾನಕ್ಕೆ ವಿರುದ್ಧವಾದದ್ದು ಎಂದು ಅವರು ಆರೋಪಿಸಿದ್ದರು.

ನ್ಯಾಯಮೂರ್ತಿ ಚಂದ್ರಚೂಡ್ ಅವರು ಭಾರತದ 50ನೇ ಸಿಜೆಐ ಆಗಿ ನವೆಂಬರ್ 9 ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದೇ ರೀತಿಯ ಅರ್ಜಿಯೊಂದನ್ನು ಕಳೆದ ವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು