ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎನ್‌ಎಕ್ಸ್ ಮೀಡಿಯಾ ಪ್ರಕರಣತಡೆಯಾಜ್ಞೆ ಅವಧಿ ವಿಸ್ತರಣೆ

Last Updated 9 ಆಗಸ್ಟ್ 2021, 11:39 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಆರೋಪಿಗಳಾಗಿರುವ ಐಎನ್‌ಎಸ್‌ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಕೆಳಹಂತದ ಕೋರ್ಟ್‌ನ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯ ಅವಧಿಯನ್ನು ವಿಸ್ತರಿಸಿ ದೆಹಲಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಆರೋಪಿ ಮತ್ತು ಅವರ ಪರ ವಕೀಲರಿಂದ ಪ್ರಕರಣದ ದಾಖಲೆಗಳ ಪರಿಶೀಲನೆ ಕುರಿತು ಕೆಳಹಂತದ ಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮುಕ್ತಾ ಗುಪ್ತಾ ಅವರು, ಈ ಬಗ್ಗೆ ಸುಪ್ರೀಂ ಕೋರ್ಟ್‌ನ ಸೂಚನೆ ಪರಿಶೀಲಿಸಲು ಸಿಬಿಐ ಪರ ವಕೀಲರಿಗೆ ಸಮಯಾವಕಾಶ ನೀಡಿದರು.

ಸುಪ್ರೀಂ ಕೋರ್ಟ್‌ ವಿಚಾರಣೆ ಕುರಿತ ಅಂಶವನ್ನು ಇತ್ಯರ್ಥಪಡಿಸಿದೆ. ಕ್ರಿಮಿನಲ್‌ ವಿಚಾರಣೆಗೆ ಸಂಬಂಧಿಸಿದ ಲೋಪ ಸರಿಪಡಿಸಿ ಕಾಯ್ದೆಯನ್ನು ರೂಪಿಸಲು ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ ಎಂದು ನ್ಯಾಯಮೂರ್ತಿ ತಿಳಿಸಿದರು. ಪ್ರಕರಣದ ವಿಚಾರಣೆಯನ್ನು ಆಗಸ್ಟ್‌ 27ಕ್ಕೆ ಮುಂದೂಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT