ಶುಕ್ರವಾರ, ಡಿಸೆಂಬರ್ 2, 2022
21 °C

ಇ.ಡಿ ಪ್ರಕರಣ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ಗೆ ಜಾಮೀನು

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಅವರಿಗೆ ಬಾಂಬೆ ಹೈಕೋರ್ಟ್‌ ಜಾಮೀನು ನೀಡಿದೆ. ಆದರೆ ಈ ಆದೇಶವನ್ನು ಅಕ್ಟೋಬರ್‌ 13ರ ವರೆಗೆ ಕೋರ್ಟ್‌ ತಡೆ ಹಿಡಿದಿದೆ. ಅಲ್ಲಿವ ವರೆಗೆ ಜಾರಿ ನಿರ್ದೇಶನಾಲಯಕ್ಕೆ ಜಾಮೀನು ವಿರೋಧಿಸಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ಶಿವಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭ ಗೃಹ ಸಚಿವರಾಗಿದ್ದ ಅನಿಲ್‌ ದೇಶ್‌ಮುಖ್‌ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ 2021ರ ನವೆಂಬರ್‌ನಲ್ಲಿ ಮೊದಲಿಗೆ ಜಾರಿ ನಿರ್ದೇಶನಾಲಯ, ನಂತರ ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿತ್ತು. 

ಅನಿಲ್‌ ದೇಶ್‌ಮುಖ್‌ ಅವರಿಗೆ ಜಾಮೀನು ನೀಡಲಾಗಿದೆ. ₹ 1 ಲಕ್ಷ  ಮುಚ್ಚಳಿಕೆಯೊಂದಿಗೆ ದೇಶ್‌ಮುಖ್‌ ಅವರನ್ನು ಬಿಡುಗಡೆ ಮಾಡಬಹುದು. ಆದರೆ ಜಾಮೀನು ಆದೇಶವನ್ನು ಅಕ್ಟೋಬರ್‌ 13ರ ವರೆಗೆ ತಡೆ ಹಿಡಿಯಲಾಗಿದೆ ಎಂದು ಹೆಚ್ಚುವರಿ ಸಾಲಿಟರ್‌ ಜೆನರಲ್‌ ಅನಿಲ್‌ ಸಿಂಗ್‌ ತಿಳಿಸಿದ್ದಾರೆ. 

ಸುಪ್ರೀಂ ಕೋರ್ಟ್‌ನಲ್ಲಿ ಅನಿಲ್‌ ಅವರಿಗೆ ನೀಡಿರುವ ಜಾಮೀನು ಆದೇಶವನ್ನು ಪ್ರಶ್ನಿಸಬಹುದು ಎಂದು ಅನಿಲ್‌ ಸಿಂಗ್‌ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು