ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಗಲಭೆ: ಜೆಎನ್‌ಯು, ಜಾಮಿಯಾ ವಿದ್ಯಾರ್ಥಿಗಳಿಗೆ ದೆಹಲಿ ಹೈಕೋರ್ಟ್‌ ಜಾಮೀನು

Last Updated 15 ಜೂನ್ 2021, 6:56 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ವರ್ಷದ ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಜವಾಹರ್‌ಲಾಲ್‌ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ವಿದ್ಯಾರ್ಥಿಗಳಾದ ನತಾಶಾ ನರ್ವಾಲ್ ಮತ್ತು ದೇವಂಗನಾ ಕಲಿತಾ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾಲಯದ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್‌ ಮಂಗಳವಾರ ಜಾಮೀನು ನೀಡಿದೆ.

ಈ ಮೂವರು ವಿದ್ಯಾರ್ಥಿಗಳನ್ನು ಕಳೆದ ವರ್ಷ ಮೇ ತಿಂಗಳಲ್ಲಿ ‘ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ‘ ಅಡಿ ಪೊಲೀಸರು ಬಂಧಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜಾಮೀನು ನೀಡಲು ವಿಚಾರಣಾ ನ್ಯಾಯಾಲಯ ನಿರಾಕರಿಸಿತ್ತು. ಈ ಆದೇಶದ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಆರೋಪಿಗಳು ಮೇಲ್ಮನವಿ ಸಲ್ಲಿಸಿದ್ದರು.

ಈ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮೃದುಲ್ ಮತ್ತು ಅನೂಪ್ ಜೈರಾಮ್ ಬಂಭಾನಿ ಅವರನ್ನೊಳಗೊಂಡ ನ್ಯಾಯಪೀಠ, ಮೂವರು ಆರೋಪಿಗಳಿಗೆ ಜಾಮೀನು ನೀಡಿದೆ.

ಜಾಮೀನು ನೀಡುವ ವೇಳೆ ನ್ಯಾಯಾಲಯ, ಪಿಂಜ್ರಾ ಟೊಡ್‌ ಸಂಘಟನೆಯ ಕಾರ್ಯಕರ್ತರಾಗಿರುವ ನರ್ವಾಲಾ ಮತ್ತು ಕಾಳಿತಾ ಮತ್ತು ತನ್ಹಾ ಅವರಿಗೆ ತಮ್ಮ ಪಾಸ್‌ಪೋರ್ಟ್‌ಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ನಿರ್ದೇಶನ ನೀಡಿತು. ಜತೆಗೆ, ಸಾಕ್ಷ್ಯಗಳನ್ನು ಪ್ರಚೋದಿಸಬಾರದು ಮತ್ತು ನಾಶ ಮಾಡಬಾರದು ಎಂದು ಸೂಚಿಸಿತು.

ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಬೆಂಬಲಿಸುವವರು ಮತ್ತು ವಿರೋಧಿಸುವವರ ನಡುವೆ ಫೆಬ್ರುವರಿ 24ರಂದು ನಡೆದ ಘರ್ಷಣೆ ಹಿಂಸಾರೂಪ ಪಡೆದಿತ್ತು. ‌ಹಿಂಸಾಚಾರದಲ್ಲಿ 53 ಮಂದಿ ಸಾವಿಗೀಡಾಗಿದ್ದರು ಮತ್ತು 200 ಮಂದಿ ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT