ಶನಿವಾರ, ಏಪ್ರಿಲ್ 1, 2023
31 °C

ಜಿಎಸ್‌ಟಿಗೆ ಪೆಟ್ರೋಲ್‌, ಡೀಸೆಲ್‌ ತರಲು ಪಿಐಎಲ್‌: ಕೇರಳ ಹೈಕೋರ್ಟ್‌ನಿಂದ ನೋಟಿಸ್‌

ಪಿಟಿಐ Updated:

ಅಕ್ಷರ ಗಾತ್ರ : | |

ಕೊಚ್ಚಿ: ಪೆಟ್ರೋಲ್ ಮತ್ತು ಡೀಸೆಲ್‌ ಅನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ಸೇರಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಕೇರಳ ಹೈಕೋರ್ಟ್, ಸೋಮವಾರ ಜಿಎಸ್‌ಟಿ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ.

ವಿಷಯದ ಕುರಿತಂತೆ 10 ದಿನಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಜಿಎಸ್‌ಟಿ ಮಂಡಳಿಗೆ ಮುಖ್ಯ ನ್ಯಾಯಮೂರ್ತಿ ಎಸ್. ಮಣಿಕುಮಾರ್ ನೇತೃತ್ವದ ವಿಭಾಗೀಯ ಪೀಠವು ಸೂಚಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಿಎಸ್‌ಟಿ ವ್ಯಾಪ್ತಿಯಲ್ಲಿ ಏಕೆ ಸೇರಿಸಲಾಗಿಲ್ಲ ಎಂಬುದನ್ನು ತಿಳಿಸುವಂತೆ ನ್ಯಾಯಾಲಯವು ಕೌನ್ಸಿಲ್‌ಗೆ ಕೇಳಿದೆ.

ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡುವ ತನ್ನ ನಿರ್ಧಾರವನ್ನು ಜಿಎಸ್‌ಟಿ ಮಂಡಳಿ ಸೆಪ್ಟೆಂಬರ್ 17 ರಂದು ಪುನರುಚ್ಚರಿಸಿತ್ತು. ಅಬಕಾರಿ ಸುಂಕ ಮತ್ತು ಮೌಲ್ಯವರ್ಧಿತ ತೆರಿಗೆಯನ್ನು ಒಂದು ರಾಷ್ಟ್ರೀಯ ದರಕ್ಕೆ ಒಳಪಡಿಸುವುದರಿಂದ ಆದಾಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಮಂಡಳಿ ಹೇಳಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು