ಮಂಗಳವಾರ, ಸೆಪ್ಟೆಂಬರ್ 28, 2021
21 °C
ಮಹಾರಾಷ್ಟ್ರ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್‌ ನೋಟಿಸ್‌

ಮಾಜಿ ಗೃಹ ಸಚಿವ ದೇಶಮುಖ್‌ಗೆ ಸಂಬಂಧಿಸಿದ ದಾಖಲೆಗಳ ಹಸ್ತಾಂತರ ಕೋರಿ ಸಿಬಿಐ ಅರ್ಜಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್‌ ವಿರುದ್ಧದ ತನಿಖೆಗೆ ಅಗತ್ಯವಿರುವ ದಾಖಲೆಗಳನ್ನು ಒದಗಿಸಲು ನಿರ್ದೇಶನ ನೀಡುವಂತೆ ಸಿಬಿಐ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಎಸ್‌.ಎಸ್‌.ಶಿಂಧೆ ಹಾಗೂ ಎನ್.ಜೆ.ಜಮಾದಾರ್‌ ಅವರಿರುವ ವಿಭಾಗೀಯ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಿತು.

‘ತನಿಖೆಗೆ ಅಗತ್ಯವಿರುವ ದಾಖಲೆಗಳನ್ನು ಸಂಗ್ರಹಿಸಲು ತೆರಳಿದ್ದ ಸಂಸ್ಥೆಯ ಸಿಬ್ಬಂದಿಗೆ ಪೊಲೀಸರು ಬೆದರಿಕೆ ಹಾಕಿದ್ದಾರೆ. ಹೀಗಾಗಿ ಪ್ರಕರಣಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಒದಗಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಸಿಬಿಐ ಪರ ವಕೀಲ ಅನಿಲ್ ಸಿಂಗ್‌ ಹೈಕೋರ್ಟ್‌ಗೆ ತಿಳಿಸಿದರು.

ತನ್ನ ಅಧಿಕಾರಿಗಳಿಗೆ ಎಸಿಪಿಯೊಬ್ಬರು ಬೆದರಿಕೆ ಹಾಕಿದ್ದಾರೆ ಎಂಬ ಸಿಬಿಐನ ದೂರುಗಳ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಅರುಣಾ ಕಾಮತ್‌ ಅವರಿಗೆ ನ್ಯಾಯಪೀಠ ಸೂಚಿಸಿತು.

‘ಈ ವಿಷಯಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡುತ್ತೇವೆ. ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಪರಿಸ್ಥಿತಿ ಉದ್ಭವವಾಗದಂತೆ ನೋಡಿಕೊಳ್ಳಿ’ ಎಂದು ಹೇಳಿದ ನ್ಯಾಯಪೀಠ, ಅರ್ಜಿಯ ವಿಚಾರಣೆಯನ್ನು ಆ. 11ಕ್ಕೆ ಮುಂದೂಡಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು