ಮಂಗಳವಾರ, ಡಿಸೆಂಬರ್ 7, 2021
20 °C

ಅಲೋಪತಿ ವಿರುದ್ಧ ತಪ್ಪು ಮಾಹಿತಿ: ರಾಮದೇವ್‌ಗೆ ಸಮನ್ಸ್ ಜಾರಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್-19 ಸಾಂಕ್ರಾಮಿಕದ ವೇಳೆ ಅಲೋಪತಿ ವಿರುದ್ಧ ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ಹಲವು ವೈದ್ಯರ ಸಂಘಗಳು ದಾಖಲಿಸಿದ್ದ ಮೊಕದ್ದಮೆಯ ಮೇರೆಗೆ ದೆಹಲಿ ಹೈಕೋರ್ಟ್ ಬುಧವಾರ ರಾಮದೇವ್‌ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಗೂಗಲ್, ಫೇಸ್‌ಬುಕ್ ಮತ್ತು ಟ್ವಿಟರ್‌ಗಳಿಗೂ ನ್ಯಾಯಾಲಯ ನೋಟಿಸ್ ನೀಡಿದೆ.

ನ್ಯಾಯಮೂರ್ತಿ ಸಿ. ಹರಿಶಂಕರ್ ಅವರು, ಪ್ರತಿಕ್ರಿಯೆ ಸಲ್ಲಿಸಲು ರಾಮ್‌ದೇವ್‌ ಅವರಿಗೆ ನಾಲ್ಕು ವಾರಗಳ ಕಾಲಾವಕಾಶ ನೀಡಿದರು. ವಿಚಾರಣೆಯನ್ನು ಜನವರಿಗೆ ಮುಂದೂಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು