ಕೋವಿಡ್ ಔಷಧಗಳ ಕುರಿತು ಹೇಳಿಕೆ; ಬಾಬಾ ರಾಮ್‌ದೇವ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

ನವದೆಹಲಿ: ಕೊರೊನಿಲ್ ಕಿಟ್ ಸುಳ್ಳು ಹೇಳಿಕೆ ನೀಡುವುದನ್ನು ತಡೆಯಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಯೋಗ ಗುರು ಬಾಬಾ ರಾಮ್‌ದೇವ್ ಅವರಿಗೆ ದೆಹಲಿ ಹೈಕೋರ್ಟ್ ಗುರುವಾರ ಸಮನ್ಸ್ ಜಾರಿಗೊಳಿಸಿದೆ.
ದೆಹಲಿ ಮೆಡಿಕಲ್ ಅಸೋಸಿಯೇಷನ್ (ಡಿಎಂಎ) ಈ ಅರ್ಜಿ ಸಲ್ಲಿಸಿದೆ. ಹೈಕೋರ್ಟ್ ವಿಚಾರಣೆಯನ್ನು ಜುಲೈ 13ಕ್ಕೆ ಮುಂದೂಡಿತು. ಅಲ್ಲಿಯವರೆಗೆ ಯಾವುದೇ ರೀತಿಯ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಬಾರದು ಎಂದು ರಾಮ್‌ದೇವ್ ಅವರಿಗೆ ತಿಳಿಸುವಂತೆ ಅವರ ಪರ ವಕೀಲರಿಗೆ ಹೈಕೋರ್ಟ್ ಮೌಖಿಕವಾಗಿ ಸೂಚಿಸಿತು.
ಔಷಧಗಳು ಕೋವಿಡ್ ಅನ್ನು ಗುಣಪಡಿಸುವುದಿಲ್ಲ ಎಂದು ರಾಮ್‌ದೇವ್ ಅವರು ಹೇಳಿರುವುದು ಸರಿಯಲ್ಲ. ಇದು ಜನರನ್ನು ದಾರಿ ತಪ್ಪಿಸುತ್ತದೆ ಎಂದು ಡಿಎಂಎ ಹೇಳಿದೆ.
ಇದನ್ನೂ ಓದಿ– ಅಮೀರ್ ವಿರುದ್ಧ ಪ್ರತಿಭಟಿಸುವ ಧೈರ್ಯವಿದೆಯೇ? ವೈದ್ಯಕೀಯ ಮಾಫಿಯಾಗೆ ರಾಮದೇವ್ ಸವಾಲು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.