ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಚಿಹ್ನೆ: ಉದ್ಧವ್‌ ಠಾಕ್ರೆ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್‌

Last Updated 15 ನವೆಂಬರ್ 2022, 14:49 IST
ಅಕ್ಷರ ಗಾತ್ರ

ನವದೆಹಲಿ: ಶಿವಸೇನಾ ಹೆಸರು ಹಾಗೂ ಚುನಾವಣಾ ಚಿಹ್ನೆಯನ್ನು ಮುಟ್ಟುಗೋಲು ಹಾಕಿಕೊಂಡಿರುವ ಚುನಾವಣಾ ಆಯೋಗದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಮಂಗಳವಾರ ವಜಾಗೊಳಿಸಿದೆ.

‘ಬಿಲ್ಲು–ಬಾಣದ ಚಿಹ್ನೆ ಮತ್ತು ಶಿವಸೇನಾ ಹೆಸರಿನ ವಿಚಾರದಲ್ಲಿ ಉದ್ಭವಿಸಿರುವ ಬಿಕ್ಕಟ್ಟು ಬೇಗನೆ ಶಮನಗೊಳ್ಳಲಿ ಎಂಬುದು ಶಿವಸೇನಾದ ಎರಡೂ ಬಣಗಳು ಹಾಗೂ ನಾಗರಿಕರ ಬಯಕೆಯಾಗಿದೆ. ಈ ಬಿಕ್ಕಟ್ಟನ್ನು ಸಾಧ್ಯವಾದಷ್ಟು ಬೇಗ ಪರಿಹರಿಸುವಂತೆ ನ್ಯಾಯಾಲಯವು ಚುನಾವಣಾ ಆಯೋಗಕ್ಕೆ ಸೂಚಿಸಲಿದೆ’ ಎಂದು ನ್ಯಾಯಾಧೀಶ ಸಂಜೀವ್‌ ನರೂಲಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT