ಅಹಮದಾಬಾದ್: ‘ಮೊರ್ಬಿ ಸೇತುವೆ ದುರಂತದಲ್ಲಿ ಮೃತಪಟ್ಟ 135 ಮಂದಿಯ ಕುಟುಂಬಕ್ಕೆ ತಲಾ ₹10 ಲಕ್ಷ ಹಾಗೂ ಗಾಯಗೊಂಡ 56 ಮಂದಿಗೂ ₹2 ಲಕ್ಷದಂತೆ ಮಧ್ಯಂತರ ಪರಿಹಾರ ನೀಡಬೇಕು’ ಎಂದು ಸೇತುವೆಯ ನಿರ್ವಹಣೆ ಮಾಡುತ್ತಿದ್ದ ಒರೆವಾ ಸಂಸ್ಥೆಗೆ ಗುಜರಾತ್ ಹೈಕೋರ್ಟ್ ಬುಧವಾರ ನಿರ್ದೇಶನ ನೀಡಿದೆ.
ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೋನಿಯಾ ಗೋಖನಿ ಹಾಗೂ ನ್ಯಾಯಮೂರ್ತಿ ಸಂದೀಪ್ ಭಟ್ ಅವರಿದ್ದ ಪೀಠವು ಈ ನಿರ್ದೇಶನ ನೀಡಿದೆ.
‘ಮೃತಪಟ್ಟ ಕುಟುಂಬದವರಿಗೆ ಹಾಗೂ ಗಾಯಗೊಂಡವರಿಗೆಲ್ಲ ಸೇರಿ ಒಟ್ಟು ₹5 ಕೋಟಿ ಪರಿಹಾರ ಮಧ್ಯಂತರ ಪರಿಹಾರ ನೀಡಲು ಸಿದ್ಧರಿದ್ದೇವೆ ಎಂದು’ ಒರೆವಾ ಸಂಸ್ಥೆಯು ಮಂಗಳವಾರ ಹೈಕೋರ್ಟ್‌ಗೆ ತಿಳಿಸಿತ್ತು. ಆದರೆ, ಈ ಮೊತ್ತವು ‘ಬಹಳ ಕಡಿಮೆಯಾಯಿತು’ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.