ಏರ್ ಇಂಡಿಯಾದಿಂದ ಪೈಲೆಟ್‌ಗಳ ವಜಾ: ದೆಹಲಿ ಹೈಕೋರ್ಟ್‌ನಿಂದ ರದ್ದು

ನವದೆಹಲಿ: ಏರ್ ಇಂಡಿಯಾದ 40 ಪೈಲೆಟ್‌ಗಳನ್ನು ಕಳೆದ ಆಗಸ್ಟ್‌ನಲ್ಲಿ ಕೆಲಸದಿಂದ ವಜಾಗೊಳಿಸಿದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ರದ್ದುಗೊಳಿಸಿದ್ದು, ಆ ಎಲ್ಲ ನೌಕರರನ್ನು ಕೆಲಸಕ್ಕೆ ಮರು ನಿಯೋಜಿಸಿಕೊಳ್ಳುವಂತೆ ನಿರ್ದೇಶನ ನೀಡಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರು ವಿಮಾನಯಾನ ಸಂಸ್ಥೆಗೆ ಈ ನಿರ್ದೇಶನ ನೀಡಿದ್ದಾರೆ. ಮರು ನೇಮಕ ಮಾಡಿಕೊಳ್ಳುವ ಪೈಲೆಟ್‌ಗಳಿಗೆ ಬಾಕಿ ವೇತನವನ್ನೂ ಪಾವತಿಸಬೇಕು ಎಂದು ಆದೇಶಿಸಿದ್ದಾರೆ.
ಇದೇ ವೇಳೆ, ಪೈಲೆಟ್‌ಗಳ ಕೆಲಸ ತೃಪ್ತಿದಾಯಕವಾಗಿದ್ದರೆ, ಭವಿಷ್ಯದಲ್ಲಿ ಅವರ ಒಪ್ಪಂದದ ಅವಧಿಯನ್ನು ವಿಸ್ತರಿಸುವ ವಿವೇಚಾನಾಧಿಕಾರ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗೆ ಸೇರಿದ್ದಾಗಿರುತ್ತದೆ ಎಂದು ನ್ಯಾಯಾಲಯ ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪಿನ ವಿವರ ಬುಧವಾರ ಲಭ್ಯವಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.
ಕಳೆದ ವರ್ಷ ಆಗಸ್ಟ್ 13ರಂದು ಏರ್ ಇಂಡಿಯಾವು 40 ಪೈಲೆಟ್‌ಗಳನ್ನು ಕೆಲಸದಿಂದ ವಜಾಗೊಳಿಸಲು ನಿರ್ಧರಿಸಿತ್ತು. ಸಂಸ್ಥೆಯ ನಿರ್ಧಾರದ ವಿರುದ್ಧ ಪೈಲೆಟ್‌ಗಳು ನ್ಯಾಯಾಲಯದ ಮೊರೆ ಹೋಗಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.