ನವದೆಹಲಿ: ನೆಟ್ಫ್ಲಿಕ್ಸ್ನಲ್ಲಿ ಪ್ರಸಾರವಾಗುತ್ತಿರುವ ‘ಗುಂಜನ್ ಸೆಕ್ಸೇನಾ – ದಿ ಕಾರ್ಗಿಲ್ ಗರ್ಲ್’ ಸಿನಿಮಾ ಪ್ರದರ್ಶನಕ್ಕೆ ತಡೆ ನೀಡುವಂತೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.
ಈಗಾಗಲೇ ಆ ಸಿನಿಮಾ ಬಿಡುಗಡೆಯಾಗಿ ಒಟಿಟಿ ವೇದಿಕೆಯಲ್ಲಿ ಪ್ರದರ್ಶನ ಕಾಣುತ್ತಿರುವ ಈ ಸಂದರ್ಭದಲ್ಲಿ ಪ್ರಸಾರಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.
ಸಿನಿಮಾದಲ್ಲಿಭಾರತೀಯ ವಾಯುಪಡೆಯನ್ನು ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ಆಕ್ಷೇಪಿಸಿ ಸಿನಿಮಾ ಪ್ರದರ್ಶನಕ್ಕೆ ತಡೆ ನೀಡಬೇಕು ಎಂದು ಒತ್ತಾಯಿಸಿ ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು.
ಸಿನಿಮಾ ಬಿಡುಗಡೆಗೆ ಮೊದಲೇ ಏಕೆ ನ್ಯಾಯಾಲಯವನ್ನು ಸಂರ್ಪಕಿಸಲಿಲ್ಲ ಎಂದು ಕೇಳಿದ ನ್ಯಾಯಾಲಯ, ಈ ಹಂತದಲ್ಲಿ ತಡೆ ನೀಡಲಾಗದು ಎಂದಿತು.