ಶನಿವಾರ, ಮಾರ್ಚ್ 25, 2023
26 °C

‘ಗುಂಜನ್‌ ಸೆಕ್ಸೇನಾ’ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ನ್ಯಾಯಾಲಯ– ಪ್ರಾತಿನಿಧಿಕ ಚಿತ್ರ

ನವದೆಹಲಿ: ನೆಟ್‌ಫ್ಲಿಕ್ಸ್‌ನಲ್ಲಿ ಪ್ರಸಾರವಾಗುತ್ತಿರುವ ‘ಗುಂಜನ್‌ ಸೆಕ್ಸೇನಾ – ದಿ ಕಾರ್ಗಿಲ್ ಗರ್ಲ್‌’ ಸಿನಿಮಾ ಪ್ರದರ್ಶನಕ್ಕೆ ತಡೆ ನೀಡುವಂತೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ತಿರಸ್ಕರಿಸಿದೆ.

ಈಗಾಗಲೇ ಆ ಸಿನಿಮಾ ಬಿಡುಗಡೆಯಾಗಿ ಒಟಿಟಿ ವೇದಿಕೆಯಲ್ಲಿ ಪ್ರದರ್ಶನ ಕಾಣುತ್ತಿರುವ ಈ ಸಂದರ್ಭದಲ್ಲಿ ಪ್ರಸಾರಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಸಿನಿಮಾದಲ್ಲಿ ಭಾರತೀಯ ವಾಯುಪಡೆಯನ್ನು ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ಆಕ್ಷೇಪಿಸಿ ಸಿನಿಮಾ ಪ್ರದರ್ಶನಕ್ಕೆ ತಡೆ ನೀಡಬೇಕು ಎಂದು ಒತ್ತಾಯಿಸಿ ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. 

ಸಿನಿಮಾ ಬಿಡುಗಡೆಗೆ ಮೊದಲೇ ಏಕೆ ನ್ಯಾಯಾಲಯವನ್ನು ಸಂರ್ಪಕಿಸಲಿಲ್ಲ ಎಂದು ಕೇಳಿದ ನ್ಯಾಯಾಲಯ, ಈ ಹಂತದಲ್ಲಿ ತಡೆ ನೀಡಲಾಗದು ಎಂದಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು