ಶನಿವಾರ, ನವೆಂಬರ್ 28, 2020
18 °C

ಅರ್ನಬ್‌ ಮಧ್ಯಂತರ ಜಾಮೀನು ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಎರಡು ವರ್ಷಗಳ ಹಿಂದೆ ನಡೆದ ಆತ್ಮಹತ್ಯೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ.4ರಂದು ಬಂಧನಕ್ಕೆ ಒಳಗಾಗಿರುವ ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಶನಿವಾರ ವಿಚಾರಣೆ ನಡೆಸಿರುವ ಬಾಂಬೆ ಹೈಕೋರ್ಟ್‌, ತೀರ್ಪು ಕಾಯ್ದಿರಿಸಿದೆ.

ಹೀಗಾಗಿ ಅರ್ನಬ್‌ ಪೊಲೀಸ್‌ ಕಸ್ಟಡಿಯಲ್ಲೇ ಇರಲಿದ್ದಾರೆ. ‘ಇದೇ ವೇಳೆ ಸಾಮಾನ್ಯ ಜಾಮೀನಿಗಾಗಿ ನೀವು ಸೆಷನ್ಸ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದು’ ಎಂದು ಹೈಕೋರ್ಟ್‌ ಅರ್ನಬ್‌ ಅವರಿಗೆ ತಿಳಿಸಿದೆ. 

‘ಶೀಘ್ರದಲ್ಲೇ ನಾವು ಆದೇಶವನ್ನು ಹೊರಡಿಸುತ್ತೇವೆ. ಆದರೆ, ಇಂದೇ(ಶನಿವಾರ) ಆದೇಶ ಹೊರಡಿಸುವುದು ಸಾಧ್ಯವಿಲ್ಲ. ತೀರ್ಪು ಕಾಯ್ದಿರಿಸಿರುವುದು ಕೆಳ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸುವುದಕ್ಕೆ ಅಡ್ಡಿಯಾಗುವುದಿಲ್ಲ’ ಎಂದು ನ್ಯಾಯಮೂರ್ತಿಗಳಾದ ಎಸ್‌.ಎಸ್‌.ಶಿಂಧೆ ಹಾಗೂ ಎಂ.ಎಸ್‌.ಕಾರ್ಣಿಕ್‌ ಅವರಿದ್ದ ಪೀಠವು ಹೇಳಿತು. ಅರ್ನಬ್‌ ಅವರ ಜೊತೆಗೆ ಇತರೆ ಇಬ್ಬರು ಆರೋಪಿಗಳ ಜಾಮೀನು ಅರ್ಜಿಯ ತೀರ್ಪನ್ನೂ ಪೀಠ ಕಾಯ್ದಿರಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು