ಶುಕ್ರವಾರ, ಸೆಪ್ಟೆಂಬರ್ 25, 2020
26 °C
ಸೇನಾ ಅಧಿಕಾರಿಗಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ನಿರ್ಬಂಧ ವಿಚಾರ

ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲಾಗದು: ದೆಹಲಿ ಹೈಕೋರ್ಟ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸೇನಾ ಸಿಬ್ಬಂದಿಗೆ ಸಾಮಾಜಿಕ ಜಾಲತಾಣಗಳನ್ನು ಬಳಸುವುದಕ್ಕೆ ಅವಕಾಶ ನೀಡಿದರೆ ಶತ್ರು ರಾಷ್ಟ್ರಗಳಿಗೆ ಸಹಕಾರಿಯಾಗಲಿದೆ ಎನ್ನುವ ಅಂತಿಮ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದ್ದರೆ, ಈ ನಿರ್ಧಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವುದಿಲ್ಲ ಎಂದು ದೆಹಲಿ ಹೈಕೋರ್ಟ್‌ ಬುಧವಾರ ತಿಳಿಸಿದೆ.

89 ಸಾಮಾಜಿಕ ಜಾಲತಾಣಗಳನ್ನು ಸೇನಾ ಸಿಬ್ಬಂದಿ ಬಳಸಬಾರದು ಎಂದು ಸೂಚಿಸಿ ಭಾರತೀಯ ಸೇನೆಯು ಜೂನ್‌ 6ರಂದು ಹೊಸ ನೀತಿ ರೂಪಿಸಿತ್ತು. ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ ಸೇರಿದಂತೆ ಉಳಿದೆಲ್ಲ ಜಾಲತಾಣಗಳಲ್ಲಿ ಇದ್ದ ತಮ್ಮ ಖಾತೆಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲು ಆದೇಶಿಸಲಾಗಿತ್ತು. 

ಇದನ್ನು ಪ್ರಶ್ನಿಸಿ ಹಿರಿಯ ಸೇನಾ ಅಧಿಕಾರಿ ಲೆಫ್ಟಿನೆಂಟ್‌ ಕರ್ನಲ್‌ ಪಿ.ಕೆ.ಚೌಧರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ರಾಜೀವ್‌ ಸಹಾಯಿ ಮತ್ತು ಆಶಾ ಮೆನನ್‌ ಅವರಿದ್ದ ನ್ಯಾಯಪೀಠವು, ‘ಪ್ರಸ್ತುತ ಯುದ್ಧವೆಂದರೆ, ಪ್ರದೇಶದ ಸ್ವಾಧೀನವಷ್ಟೇ ಅಲ್ಲ. ಒಂದು ರಾಷ್ಟ್ರದ ಆರ್ಥಿಕತೆ ಮೇಲೆ ದಾಳಿ, ದೇಶದೊಳಗೇ ಗಲಭೆ ಸೃಷ್ಟಿಸುವುದೂ ಶತ್ರು ರಾಷ್ಟ್ರಗಳ ಯುದ್ಧದ ಭಾಗವಾಗಿದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿತು. ನಂತರದಲ್ಲಿ ಅರ್ಜಿಯನ್ನು ವಜಾಗೊಳಿಸಿತು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು