ಬುಧವಾರ, ಅಕ್ಟೋಬರ್ 20, 2021
23 °C
ಕೋವಿಡ್‌–19 ಔಷಧಗಳ ಅಕ್ರಮ ದಾಸ್ತಾನು ಸಂಗ್ರಹ ಪ್ರಕರಣ

ಗೌತಮ್ ಗಂಭೀರ್ ವಿರುದ್ಧದ ವಿಚಾರಣೆಗೆ ದೆಹಲಿ ಹೈಕೋರ್ಟ್ ತಡೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌–19 ಔಷಧಿಗಳ ಅಕ್ರಮ ದಾಸ್ತಾನು ಸಂಗ್ರಹಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ಮತ್ತು ಸಂಸದ ಗೌತಮ್ ಗಂಭೀರ್ ಅವರ ವಿರುದ್ಧದ ವಿಚಾರಣಾಧೀನ ನ್ಯಾಯಾಲಯದ ವಿಚಾರಣೆಗೆ ದೆಹಲಿ ಹೈಕೋರ್ಟ್ ಸೋಮವಾರ ತಡೆ ನೀಡಿದೆ.

ನ್ಯಾಯಮೂರ್ತಿ ರಜನೀಶ್ ಭಟ್ನಾಗರ್ ಅವರು, ಗೌತಮ್ ಗಂಭೀರ್ ಫೌಂಡೇಷನ್, ಗಂಭೀರ್ ಮತ್ತು ಇತರ ಆರೋಪಿಗಳ ವಿರುದ್ಧದ ಕ್ರಿಮಿನಲ್ ದೂರಿಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡುವಂತೆ ಔಷಣ ನಿಯಂತ್ರಣ ಪ್ರಾಧಿಕಾರಕ್ಕೆ ಸೂಚಿಸಿದರು.

ನಂತರ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 8ಕ್ಕೆ ಮುಂದೂಡಿದ ನ್ಯಾಯಮೂರ್ತಿಗಳು, ‘ಅಲ್ಲಿಯವರೆಗೆ ಪ್ರಕರಣದ ವಿಚಾರಣೆಯನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಹೇಳಿದರು.

ಕೋವಿಡ್‌–19ಗೆ ಸಂಬಂಧಿಸಿದಂತೆ ಔಷಧಿಗಳ ಅಕ್ರಮವಾಗಿ ದಾಸ್ತಾನು ಮಾಡಲಾಗಿದೆ ಎಂದು ಆರೋಪಿಸಿ ಗೌತಮ್ ಗಂಭೀರ್ ಫೌಂಡೇಷನ್, ಅದರ ಸಿಇಒ ಅಪರಾಜಿತ ಸಿಂಗ್, ಸೀಮಾ ಗಂಭೀರ್, ಗೌತಮ್ ಗಂಭೀರ್, ನತಾಶಾ ಗಂಭೀರ್ ಅವರ ವಿರುದ್ಧ ಡ್ರಗ್ಸ್ ಅಂಡ್ ಕಾಸ್ಮೆಟಿಕ್ಸ್ ಆಕ್ಟ್‌ನ ಸೆಕ್ಷನ್ 18 (ಸಿ) ಹಾಗೂ ಸೆಕ್ಷನ್ 27 (ಬಿ) (ii) ಅಡಿ ಔಷಧ ನಿಯಂತ್ರಣ ಇಲಾಖೆಯು ದೂರು ದಾಖಲಿಸಿತ್ತು.

ಈ ಸಂಬಂಧ ಆಮ್ ಆದ್ಮಿ ಪಕ್ಷದ ಶಾಸಕರಾದ ಪ್ರವೀಣ್ ಕುಮಾರ್ ಮತ್ತು ಇಮ್ರಾನ್ ಹುಸೇನ್ ಕೂಡ ಪ್ರತ್ಯೇಕವಾಗಿ ಎರಡು ದೂರು ದಾಖಲಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು