ಶುಕ್ರವಾರ, ಅಕ್ಟೋಬರ್ 23, 2020
21 °C

ರಾಜ್ಯಸಭೆ ಸದಸ್ಯರಾಗಿ ದೇವೇಗೌಡ ಪ್ರತಿಜ್ಞಾ ವಿಧಿ ಸ್ವೀಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಭಾನುವಾರ ರಾಜ್ಯಸಭೆಯ ಸದಸ್ಯರಾಗಿ ಕನ್ನಡದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಕರ್ನಾಟಕದಿಂದ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

1996ರ ನಂತರ ದೇವೇಗೌಡ ಅವರು ಮೇಲ್ಮನೆ ಸದಸ್ಯರಾಗಿ ಸದನ ಪ್ರವೇಶಿಸಿದಂತಾಗಿದೆ. ‘ರಾಜ್ಯಸಭೆಗೆ ಒಳ್ಳೆಯ ಸೇರ್ಪಡೆ’ ಎಂದು ರಾಜ್ಯಸಭೆ ಸಭಾಪತಿ ಎಂ.ವೆಂಕಯ್ಯನಾಯ್ಡು ಬಣ್ಣಿಸಿದರು.

ಮಾಜಿ ಪ್ರಧಾನಿ ಮತ್ತು ದೇಶದ ಅತ್ಯಂತ ಹಿರಿಯ ನಾಯಕರೊಬ್ಬರು ಸದನವನ್ನು ಪ್ರವೇಶಿಸಿದ್ದಾರೆ ಎಂದು ನಾಯ್ಡು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು